ಯಾಜಕಕಾಂಡ 3:16 - ಪರಿಶುದ್ದ ಬೈಬಲ್16 ಬಳಿಕ ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಇದು ಆಹಾರದ ರೂಪದಲ್ಲಿ ಯೆಹೋವನಿಗೆ ಅರ್ಪಿಸಿದ ಸುವಾಸನೆಯನ್ನು ಉಂಟುಮಾಡುವ ಸಮಾಧಾನಯಜ್ಞವಾಗಿರುತ್ತದೆ. ಆದರೆ ಅದರ ಕೊಬ್ಬು ಯೆಹೋವನಿಗೆ ಸೇರಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯಾಜಕನು ಅದನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸುಗಂಧಹೋಮ ರೂಪವಾಗಿ ಸರ್ವೇಶ್ವರನಿಗೆ ಆಹಾರವಾಗಿರುವುದು. ಬಲಿಪ್ರಾಣಿಗಳ ಕೊಬ್ಬೆಲ್ಲವು ಸರ್ವೇಶ್ವರನದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅದು ಸುಗಂಧ ಹೋಮರೂಪವಾಗಿ ಯೆಹೋವನಿಗೆ ಆಹಾರವಾಗಿರುವದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ. ಅಧ್ಯಾಯವನ್ನು ನೋಡಿ |
“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.