ಯಾಜಕಕಾಂಡ 3:17 - ಪರಿಶುದ್ದ ಬೈಬಲ್17 ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನಕೂಡದೆಂಬದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತ ನಿಯಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.
ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.
ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”