Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:2 - ಪರಿಶುದ್ದ ಬೈಬಲ್‌

2 ಆ ವ್ಯಕ್ತಿಯು ತನ್ನ ಕೈಯನ್ನು ಪಶುವಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಬಾಗಿಲಲ್ಲಿ ಅದನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ಆ ರಕ್ತವನ್ನು ಯಜ್ಞವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಆ ಪ್ರಾಣಿಯನ್ನು ಸರ್ವೇಶ್ವರನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಡಬೇಕು; ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಬಾಗಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:2
23 ತಿಳಿವುಗಳ ಹೋಲಿಕೆ  

“ತರುವಾಯ ನೀನು ಹೋರಿಯನ್ನು ದೇವದರ್ಶನಗುಡಾರದ ಎದುರಿಗೆ ತರಬೇಕು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”


ಹೀಗೆ ನೀವು ಜೀವದಾಯಕನನ್ನೇ ಕೊಂದುಹಾಕಿದಿರಿ! ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಇದಕ್ಕೆ ನಾವೇ ಸಾಕ್ಷಿಗಳು. ಇದನ್ನು ನಾವು ಕಣ್ಣಾರೆ ಕಂಡಿದ್ದೇವೆ.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.


ಬಳಿಕ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವುದಕ್ಕೆ ವಧಿಸಬೇಕಾದ ಎರಡನೆಯ ಟಗರನ್ನು ತಂದನು. ಆರೋನನೂ ಅವನ ಪುತ್ರರೂ ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.


ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


ಬಳಿಕ ದೇವದರ್ಶನಗುಡಾರದ ದ್ವಾರದಲ್ಲಿ ಹೋರಿಯನ್ನು ವಧಿಸು. ಯೆಹೋವನು ಇದನ್ನು ನೋಡುವನು.


ಆ ಟಗರನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು.


ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಿನ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ತೆಗೆದು ಪಿತ್ತಕೋಶದ ಹತ್ತಿರ ಮೂತ್ರಪಿಂಡಗಳವರೆಗೆ ಇರುವ ಕೊಬ್ಬನ್ನೂ ತೆಗೆದು ಯೆಹೋವನಿಗೆ ಹೋಮಮಾಡಬೇಕು.


ಅವನು ತನ್ನ ಕೈಯನ್ನು ಪಶುವಿನ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ತರುವಾಯ ಆರೋನನ ಪುತ್ರರು ಅದರ ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


“ಆದರೆ ಚೊಚ್ಚಲು ಆಕಳಿಗಾಗಲಿ ಕುರಿಗಾಗಲಿ ಆಡಿಗಾಗಲಿ ಈಡನ್ನು ಕೊಡಕೂಡದು. ಆ ಪಶುಗಳು ಪವಿತ್ರವಾಗಿವೆ. ಅವುಗಳ ರಕ್ತವನ್ನು ವೇದಿಕೆಯ ಮೇಲೆ ಚೆಲ್ಲಿ ಅವುಗಳ ಕೊಬ್ಬನ್ನು ಯೆಹೋವನಿಗೆ ಮೆಚ್ಚಿಗೆಕರವಾದ ಸುಗಂಧ ವಾಸನೆಯ ತ್ಯಾಗಮಯವಾದ ಕಾಣಿಕೆಯನ್ನಾಗಿ ಹೋಮಮಾಡಿರಿ.


“ತರುವಾಯ ಆರೋನನಿಗೂ ಅವನ ಪುತ್ರರಿಗೂ ತಮ್ಮ ಕೈಗಳನ್ನು ಒಂದು ಟಗರಿನ ತಲೆಯ ಮೇಲೆ ಇಡಬೇಕೆಂದು ಹೇಳು.


“ಮತ್ತೊಂದು ಟಗರಿನ ಮೇಲೆ ತಮ್ಮ ಕೈಗಳನ್ನಿಡಲು ಆರೋನನಿಗೂ ಅವನ ಪುತ್ರರಿಗೂ ಹೇಳು.


ಇಸ್ರೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ ಕುರಿಮರಿಯನ್ನಾಗಲಿ ಹೋತವನ್ನಾಗಲಿ ಪಾಳೆಯದೊಳಗೆ ಅಥವಾ ಪಾಳೆಯದ ಹೊರಗೆ ವಧಿಸಬಹುದು.


ಅವನು ಆ ಪ್ರಾಣಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅವನು ಆ ಪಶುವಿನ ಒಂದು ಭಾಗವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಅವನು ರಕ್ತವನ್ನು ಸುರಿಸಿದ್ದರಿಂದ ತನ್ನ ಕಾಣಿಕೆಯನ್ನು ಯೆಹೋವನ ಪವಿತ್ರ ಗುಡಾರದೊಳಗೆ ತೆಗೆದುಕೊಂಡು ಹೋಗಬೇಕು. ಅವನು ಪ್ರಾಣಿಯ ಒಂದು ಭಾಗವನ್ನು ಯೆಹೋವನಿಗೆ ಉಡುಗೊರೆಯಾಗಿ ತೆಗೆದುಕೊಂಡು ಹೋಗದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು