Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:5 - ಪರಿಶುದ್ದ ಬೈಬಲ್‌

5 ಬಳಿಕ ಆರೋನನ ಪುತ್ರರು ಕೊಬ್ಬನ್ನು ವೇದಿಕೆಗೆ ತಂದು ಅದನ್ನು ಬೆಂಕಿಯಲ್ಲಿ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮದ ಮೇಲಿಡಬೇಕು. ಅದು ಅಗ್ನಿಯ ಮೂಲಕ ಅರ್ಪಿಸುವ ಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆರೋನನ ವಂಶಜರಾದ ಯಾಜಕರು ಅದನ್ನು ಬಲಿಪೀಠದಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ದಹನಬಲಿಪದಾರ್ಥಗಳೊಡನೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧ ಬಲಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮದ್ರವ್ಯದ ಮೇಲೆಯೇ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆರೋನನ ಪುತ್ರರು ಅದನ್ನು ಬಲಿಪೀಠದಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನಬಲಿಯಾಗಿ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು, ಯೆಹೋವ ದೇವರಿಗೆ ಸುವಾಸನೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:5
24 ತಿಳಿವುಗಳ ಹೋಲಿಕೆ  

ಆದರೆ ವೇದಿಕೆಯ ಮೇಲೆ ಬೆಂಕಿ ಉರಿಯುತ್ತಲೇ ಇರಬೇಕು. ಅದನ್ನು ಆರಿ ಹೋಗುವುದಕ್ಕೆ ಬಿಡಬಾರದು, ಯಾಜಕನು ಪ್ರತಿ ಮುಂಜಾನೆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಸಿದ್ಧಪಡಿಸಿ, ಸಮಾಧಾನಯಜ್ಞದ ಕೊಬ್ಬನ್ನು ಸುಡಬೇಕು.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಬಳಿಕ ಹೋರಿಯ ಒಳಗಿನ ಕೊಬ್ಬನ್ನೂ ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೂ ತೆಗೆದುಬಿಡು. ಈ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡು.


“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.


ಬಳಿಕ ಲೇವಿಯರು ತಮಗಾಗಿಯೂ ಆರೋನನ ಸಂತತಿಯವರಾದ ಯಾಜಕರಿಗಾಗಿಯೂ ಮಾಂಸವನ್ನು ಸಿದ್ಧಮಾಡಿದರು. ಆ ಯಾಜಕರು ರಾತ್ರಿ ತನಕವೂ ಕೆಲಸದಲ್ಲಿ ನಿರತರಾಗಿದ್ದರು; ಸರ್ವಾಂಗಹೋಮಗಳನ್ನೂ ಪಶುಗಳ ಕೊಬ್ಬನ್ನೂ ಹೋಮಮಾಡುತ್ತಾ ಇದ್ದರು.


ಅಂದು ರಾಜನಾದ ಸೊಲೊಮೋನನು ಆಲಯದ ಮುಂದಿನ ಅಂಗಳವನ್ನು ಪ್ರತಿಷ್ಠಿಸಿದನು. ಅವನು ಸರ್ವಾಂಗಹೋಮಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸಿದ್ದ ಪಶುಗಳ ಕೊಬ್ಬನ್ನು ಅಂಗಳದಲ್ಲಿ ಅರ್ಪಿಸಿದನು. ಯಾಕೆಂದರೆ ಯೆಹೋವನ ಮುಂದೆ ಇದ್ದ ಹಿತ್ತಾಳೆಯ ಯಜ್ಞವೇದಿಕೆಯು ಈ ಎಲ್ಲವನ್ನು ಹಿಡಿಸಲಾರದಷ್ಟು ಚಿಕ್ಕದಾಗಿತ್ತು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಅದು ಯೆಹೋವನಿಗೆ ಬೆಂಕಿಯ ಮೂಲಕ ಅರ್ಪಿಸಿದ ಆಹಾರವಾಗುವುದು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಆರೋನನು ಧಾನ್ಯನೈವೇದ್ಯವನ್ನು ಯಜ್ಞವೇದಿಕೆಯ ಬಳಿಗೆ ತಂದನು. ಅವನು ಒಂದು ಹಿಡಿ ಧಾನ್ಯವನ್ನು ತೆಗೆದುಕೊಂಡು ದಿನಂಪ್ರತಿ ಹೊತ್ತಾರೆಯ ವೇಳೆಯಲ್ಲಿ ಅರ್ಪಿಸುವ ಯಜ್ಞವಲ್ಲದೆ ಇದನ್ನೂ ಕೂಡ ಅರ್ಪಿಸಿದನು.


“ನಿಮ್ಮಲ್ಲಿ ಎಳೆಹೋರಿಯನ್ನು ಯೆಹೋವನಿಗೆ ಸರ್ವಾಂಗಹೋಮವನ್ನಾಗಲಿ ಹರಕೆಯ ಯಜ್ಞವನ್ನಾಗಲಿ ಸಮಾಧಾನಯಜ್ಞವನ್ನಾಗಲಿ ಅರ್ಪಿಸುವವನು


ಅವರಿಗೆ ಹೀಗೆ ಹೇಳು: ನೀವು ಯೆಹೋವನಿಗೆ ಕೊಡಬೇಕಾಗಿರುವ ತ್ಯಾಗಮಯವಾದ ಕಾಣಿಕೆಗಳು ಇವುಗಳೇ: ದಿನನಿತ್ಯದ ಸರ್ವಾಂಗಹೋಮಕ್ಕಾಗಿ ಒಂದು ವರ್ಷ ವಯಸ್ಸಿನ ಎರಡು ಗಂಡುಕುರಿಗಳು.


ಇವುಗಳೊಡನೆ ಧಾನ್ಯನೈವೇದ್ಯಕ್ಕಾಗಿ ನೀವು ಪ್ರತಿಯೊಂದು ಹೋರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಒಂಭತ್ತು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು. ಪ್ರತಿಯೊಂದು ಟಗರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಆರು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು.


ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಈ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ತರುವಾಯ ಯಾಜಕನು ಪಕ್ಷಿಯ ರೆಕ್ಕೆಗಳನ್ನು ಕಿತ್ತುಹಾಕಬೇಕು. ಆದರೆ ಅವನು ಪಕ್ಷಿಯನ್ನು ಎರಡು ಭಾಗಗಳಾಗಿ ವಿಭಾಗಿಸಬಾರದು. ಯಾಜಕನು ಪಕ್ಷಿಯನ್ನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಗಳ ಮೇಲಿಟ್ಟು ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಸಮರ್ಪಣೆಯಾದ ಸರ್ವಾಂಗಹೋಮವಾಗಿದೆ. ಅದರ ಸುವಾಸನೆ ಯೆಹೋವನಿಗೆ ಪ್ರಿಯವಾಗಿದೆ.


“ಆದರೆ ಚೊಚ್ಚಲು ಆಕಳಿಗಾಗಲಿ ಕುರಿಗಾಗಲಿ ಆಡಿಗಾಗಲಿ ಈಡನ್ನು ಕೊಡಕೂಡದು. ಆ ಪಶುಗಳು ಪವಿತ್ರವಾಗಿವೆ. ಅವುಗಳ ರಕ್ತವನ್ನು ವೇದಿಕೆಯ ಮೇಲೆ ಚೆಲ್ಲಿ ಅವುಗಳ ಕೊಬ್ಬನ್ನು ಯೆಹೋವನಿಗೆ ಮೆಚ್ಚಿಗೆಕರವಾದ ಸುಗಂಧ ವಾಸನೆಯ ತ್ಯಾಗಮಯವಾದ ಕಾಣಿಕೆಯನ್ನಾಗಿ ಹೋಮಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು