ಯಾಜಕಕಾಂಡ 3:9 - ಪರಿಶುದ್ದ ಬೈಬಲ್9 ಅವನು ಸಮಾಧಾನಯಜ್ಞ ಪಶುವಿನ ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನು ಕರುಳುಗಳ ಮೇಲಿರುವ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೆಲ್ಲಾ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಶಾಂತಿಸಮಾಧಾನಕ್ಕಾಗಿ ಅರ್ಪಿಸುವ ಆ ಬಲಿ ಪ್ರಾಣಿಯ ಕೊಬ್ಬನ್ನು ಸರ್ವೇಶ್ವರನಿಗೆ ಹೋಮವಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ಸಮಾಧಾನಯಜ್ಞಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನೂ ವಪೆಯನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸಮಾಧಾನದ ಬಲಿಗಾಗಿ ಅದರ ಇಡೀ ಹಿಂಭಾಗವನ್ನೂ, ಅದರ ಕೊಬ್ಬನ್ನೂ, ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ, ಅಧ್ಯಾಯವನ್ನು ನೋಡಿ |
ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.