Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:18 - ಪರಿಶುದ್ದ ಬೈಬಲ್‌

18 ಬಳಿಕ ಯಾಜಕನು ರಕ್ತದಲ್ಲಿ ಸ್ವಲ್ಪವನ್ನು ವೇದಿಕೆಯ ಮೂಲೆಗಳಲ್ಲಿ ಹಾಕಬೇಕು. (ಈ ವೇದಿಕೆಯು ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇರುತ್ತದೆ.) ಯಾಜಕನು ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿದುಬಿಡಬೇಕು. (ಈ ವೇದಿಕೆಯು ದೇವದರ್ಶನ ಗುಡಾರದ ಬಾಗಿಲಲ್ಲಿ ಇರುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಧೂಪವೇದಿಕೆಯ ಕೊಂಬುಗಳಿಗೆ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿಗೆದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:18
11 ತಿಳಿವುಗಳ ಹೋಲಿಕೆ  

ಯಾಜಕನು ಸ್ವಲ್ಪ ರಕ್ತವನ್ನು ಧೂಪವೇದಿಕೆಯ ಮೂಲೆಗಳಿಗೆ ಹಚ್ಚಬೇಕು. (ಈ ವೇದಿಕೆಯು ಯೆಹೋವನ ಸನ್ನಿಧಿಯಲ್ಲಿರುವ ದೇವದರ್ಶನಗುಡಾರದಲ್ಲಿದೆ.) ಯಾಜಕನು ಹೋರಿಯ ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿಯಬೇಕು. (ಈ ವೇದಿಕೆಯು ದೇವದರ್ಶನಗುಡಾರದ ಬಾಗಿಲಲ್ಲಿ ಇರುತ್ತದೆ.)


ಯಾಜಕನು ಪಾಪಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದು,


ಬಳಿಕ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಆಡಿನ ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು.


ಯಾಜಕನು ಪಾಪಪರಿಹಾರಕಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಕುರಿಮರಿಯ ರಕ್ತವನ್ನೆಲ್ಲಾ ವೇದಿಕೆಯ ಬುಡದಲ್ಲಿ ಸುರಿಯಬೇಕು.


ಯಾಜಕನು ದೋಷಪರಿಹಾರಕ ಯಜ್ಞದಿಂದ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬದಿಯಲ್ಲಿ ಚಿಮಿಕಿಸಬೇಕು. ಬಳಿಕ ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು. ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.


ಆದರೆ ಪಾಪಪರಿಹಾರಕ ಯಜ್ಞದ ರಕ್ತವನ್ನು ದೇವದರ್ಶನಗುಡಾರದೊಳಗೆ ತೆಗೆದುಕೊಂಡು ಹೋಗಿ, ಜನರನ್ನು ಶುದ್ಧಿಗೊಳಿಸಲು ಪವಿತ್ರಸ್ಥಳದಲ್ಲಿ ಉಪಯೋಗಿಸಿದರೆ, ಆ ಪಾಪಪರಿಹಾರಕ ಯಜ್ಞವನ್ನು ಅಗ್ನಿಯಲ್ಲಿ ಸುಟ್ಟುಬಿಡಬೇಕು. ಯಾಜಕರು ಅದರ ಮಾಂಸವನ್ನು ತಿನ್ನಲೇಬಾರದು.


ಯಾಜಕರು ಹೋರಿಗಳನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದರು. ಅನಂತರ ಕುರಿಮರಿಗಳನ್ನು ವಧಿಸಿ ಅದರ ರಕ್ತವನ್ನೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಿದರು.


ತರುವಾಯ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬಳಿಗೆ ಹೋಗು. ವೇದಿಕೆಯ ಕೊಂಬುಗಳಿಗೆ ನಿನ್ನ ಬೆರಳಿನಿಂದ ರಕ್ತವನ್ನು ಹಚ್ಚು. ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಕೆಯ ಬುಡಕ್ಕೆ ಸುರಿದುಬಿಡು.


“ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.”


ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು.


ಆರೋನನ ಪುತ್ರರು ಅದರ ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನ ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯಜ್ಞವೇದಿಕೆಯ ಮೂಲೆಗಳಿಗೆ ಹಚ್ಚಿದನು. ಬಳಿಕ ಆರೋನನು ರಕ್ತವನ್ನು ಯಜ್ಞವೇದಿಕೆಯ ಬುಡದಲ್ಲಿ ಸುರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು