ಯಾಜಕಕಾಂಡ 4:21 - ಪರಿಶುದ್ದ ಬೈಬಲ್21 ಯಾಜಕನು ಈ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ, ಆ ಮೊದಲನೆಯ ಹೋರಿಯನ್ನು ಸುಟ್ಟುಹಾಕಿದ ಸ್ಥಳದಲ್ಲಿಯೇ ಅದನ್ನು ಸುಡಬೇಕು. ಇದು ಇಡೀ ಸಮೂಹದ ಪಾಪವನ್ನು ಪರಿಹಾರ ಮಾಡುವ ಸಮರ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟಂತೆಯೇ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮಾಜದ ದೋಷಪರಿಹಾರಕ ಬಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕಯಜ್ಞ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ, ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡಬೇಕು. ಅದು ಸಮಾಜಕ್ಕೆ ಪಾಪ ಪರಿಹಾರದ ಬಲಿಯಾಗಿ ಇರುವುದು. ಅಧ್ಯಾಯವನ್ನು ನೋಡಿ |