Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:26 - ಪರಿಶುದ್ದ ಬೈಬಲ್‌

26 ಹೋತದ ಕೊಬ್ಬನ್ನೆಲ್ಲಾ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಸಮಾಧಾನಯಜ್ಞವಾಗಿದೆ. ಕೊಬ್ಬನ್ನು ಹೋಮಮಾಡುವಂತೆ ಅದನ್ನು ಹೋಮಮಾಡಬೇಕು. ಹೀಗೆ ಯಾಜಕನು ಅಧಿಪತಿಯನ್ನು ಶುದ್ಧಗೊಳಿಸುವನು. ಆಗ ದೇವರು ಆ ಅಧಿಪತಿಯನ್ನು ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಶಾಂತಿಸಮಾಧಾನದ ಬಲಿಪ್ರಾಣಿಯ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:26
22 ತಿಳಿವುಗಳ ಹೋಲಿಕೆ  

ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.


ಆಗ ಯಾಜಕನು ನಿರುದ್ದೇಶದಿಂದ ತಪ್ಪುಮಾಡಿದವನ ಕ್ಷಮಾಪಣೆಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.


ತರುವಾಯ ಯಾಜಕನು ಎರಡನೆಯ ಪಕ್ಷಿಯನ್ನು ಸರ್ವಾಂಗಹೋಮದ ವಿಧಿಗಳಿಗನುಸಾರವಾಗಿ ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಅವನನ್ನು ಕ್ಷಮಿಸುವನು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಬಳಿಕ ಆರೋನನ ಪುತ್ರರು ಕೊಬ್ಬನ್ನು ವೇದಿಕೆಗೆ ತಂದು ಅದನ್ನು ಬೆಂಕಿಯಲ್ಲಿ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮದ ಮೇಲಿಡಬೇಕು. ಅದು ಅಗ್ನಿಯ ಮೂಲಕ ಅರ್ಪಿಸುವ ಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಬಳಿಕ ಯಾಜಕನು ಯೆಹೋವನ ಸನ್ನಿಧಿಗೆ ಹೋಗಿ ಅವನನ್ನು ಶುದ್ಧಿಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.”


ಅವನು ಅಂಗದೋಷವಿಲ್ಲದ ಮತ್ತು ಸರಿಯಾದ ಬೆಲೆಬಾಳುವ ಟಗರನ್ನು ಯಾಜಕನ ಬಳಿಗೆ ತರಬೇಕು. ಟಗರು ದೋಷಪರಿಹಾರಕ ಯಜ್ಞವಾಗಿರುವುದು. ಹೀಗೆ ಯಾಜಕನು ತಿಳಿಯದೆ ಮಾಡಿದ ಪಾಪದಿಂದ ಅವನನ್ನು ಶುದ್ಧಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.


ಆ ವ್ಯಕ್ತಿಯೂ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮಾಡಿದ ಪಾಪಕ್ಕಾಗಿ ಈ ಬೆಲೆಯನ್ನು ತೆರಬೇಕು. ಇದಲ್ಲದೆ ಆ ಬೆಲೆಯ ಐದನೆಯ ಒಂದು ಭಾಗವನ್ನು ಸೇರಿಸಿ ಆ ಹಣವನ್ನು ಯಾಜಕನಿಗೆ ಕೊಡಬೇಕು. ಈ ರೀತಿಯಾಗಿ ಯಾಜಕನು ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವುದರ ಮೂಲಕ ಅವನನ್ನು ಶುದ್ಧಿಮಾಡುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಹೀಗೆ ಆ ವ್ಯಕ್ತಿಯನ್ನು ಅವನ ದೋಷಗಳಿಂದ ಶುದ್ಧೀಕರಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು. ಧಾನ್ಯನೈವೇದ್ಯದಲ್ಲಿರುವಂತೆಯೇ ಯಜ್ಞದಲ್ಲಿ ಉಳಿದ ಭಾಗವು ಯಾಜಕನಿಗೆ ಸೇರಿದೆ. ಧಾನ್ಯಸಮರ್ಪಣೆಯಲ್ಲಿಯೂ ಉಳಿದ ಭಾಗವು ಯಾಜಕನಿಗೆ ಸೇರಿದೆ.”


ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು.


ತರುವಾಯ ಯಾಜಕನು ಪಶುವಿನಿಂದ ಕೊಬ್ಬನ್ನೆಲ್ಲಾ ತೆಗೆದು ಅದನ್ನು ವೇದಿಕೆಯ ಮೇಲೆ ಹೋಮಮಾಡಬೇಕು.


ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ತಲೆಗೆ ಹಚ್ಚುವನು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧನನ್ನಾಗಿ ಮಾಡುವನು.


ಯಾಜಕನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಹೀಗೆ ಯಾಜಕನು ಅವನ ಅಶುದ್ಧವಾದ ಸ್ರಾವಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.


ಯಾಕೆಂದರೆ ದೇಹದ ಜೀವ ರಕ್ತದಲ್ಲಿದೆ. ನೀವು ನಿಮಗೋಸ್ಕರವಾಗಿ ಯಜ್ಞವೇದಿಕೆಯ ಮೇಲೆ ಪ್ರಾಯಶ್ಚಿತ್ತ ಮಾಡಲಿ ಎಂದು ನಾನು ಅದನ್ನು ನಿಮಗೆ ಕೊಟ್ಟಿದ್ದೇನೆ. ನೀವು ನಿಮಗೋಸ್ಕರವಾಗಿ ಪ್ರಾಯಶ್ಚಿತ್ತ ಮಾಡಲು ಈ ನಿಯಮಗಳನ್ನು ಉಪಯೋಗಿಸಬೇಕು. ಒಬ್ಬನ ಜೀವಕ್ಕೆ ರಕ್ತವೇ ಪ್ರಾಯಶ್ಚಿತ್ತವಾಗಿದೆ. ಜೀವಿಯೊಂದನ್ನು ಕೊಂದಿದ್ದರ ಬೆಲೆಯಾಗಿ ನೀವು ನನಗೆ ಆ ರಕ್ತವನ್ನು ಕೊಡಬೇಕು.


ಯಾಜಕನು ಅವನನ್ನು ಶುದ್ಧಿಮಾಡುವ ಕಾರ್ಯಗಳನ್ನು ಮಾಡುವನು. ಯಾಜಕನು ಯೆಹೋವನ ಸನ್ನಿಧಿಯಲ್ಲಿ ಆ ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅದು ಆ ಪುರುಷನು ಮಾಡಿದ ಪಾಪಗಳ ಪರಿಹಾರಕ್ಕಾಗಿರುವುದು. ಆಗ ಅವನಿಗೆ ಕ್ಷಮಾಪಣೆಯಾಗುವುದು.


“ಈ ರೀತಿಯಲ್ಲಿ ಇಸ್ರೇಲರ ಇಡೀ ಸಮುದಾಯದವರ ಕ್ಷಮೆಗಾಗಿ ಯಾಜಕನು ಪ್ರಾಯಶ್ಚಿತ್ತ ಮಾಡುವನು. ಯಾಕೆಂದರೆ ಅದು ತಿಳಿಯದೆ ಮಾಡಿದ ತಪ್ಪಾಗಿತ್ತು ಮತ್ತು ಆ ತಪ್ಪಿಗಾಗಿ ಅವರು ತಮ್ಮ ಅರ್ಪಣೆಯನ್ನು ಯೆಹೋವನಿಗೆ ಕಾಣಿಕೆಯಾಗಿ ತಂದರು ಮತ್ತು ಯೆಹೋವನ ಎದುರಿನಲ್ಲಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿದರು.


“ಎರಡನೇ ದಿವಸದಲ್ಲಿ ಪೂರ್ಣಾಂಗವಾದ ಹೋತವನ್ನು ನೀನು ಅರ್ಪಿಸಬೇಕು. ಪಾಪಪರಿಹಾರಕಯಜ್ಞಕ್ಕಾಗಿ ಯಾಜಕರು ಹೇಗೆ ಯಜ್ಞವೇದಿಯನ್ನು ಪವಿತ್ರ ಮಾಡಿದರೋ ಅದೇ ರೀತಿಯಲ್ಲಿ ತಿರುಗಿ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು