ಯಾಜಕಕಾಂಡ 4:28 - ಪರಿಶುದ್ದ ಬೈಬಲ್28 ಆ ವ್ಯಕ್ತಿ ತನ್ನ ಪಾಪದ ಕುರಿತು ತಿಳಿದುಕೊಂಡರೆ, ಆಗ ಅವನು ಅಂಗದೋಷವಿಲ್ಲದ ಒಂದು ಆಡನ್ನು ತರಬೇಕು. ಅದು ಅವನ ಪಾಪಪರಿಹಾರಕ ಯಜ್ಞವಾಗಿದೆ. ಅವನು ತಾನು ಮಾಡಿದ ಪಾಪಕ್ಕಾಗಿ ಆಡನ್ನು ತರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ತನ್ನ ತಪ್ಪು ತನಗೆ ತಿಳಿದು ಬಂದಾಗ ದೋಷಪರಿಹಾರಕ್ಕಾಗಿ ಕಳಂಕರಹಿತವಾದ ಒಂದು ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇಲ್ಲವೆ ಅವರು ಮಾಡಿದ ಪಾಪವು ಅವರಿಗೆ ತಿಳಿದುಬಂದರೆ, ಅವರು ಪಾಪ ಪರಿಹಾರಕ್ಕಾಗಿ ಕಳಂಕರಹಿತವಾದ ಒಂದು ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.