Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:3 - ಪರಿಶುದ್ದ ಬೈಬಲ್‌

3 “ಅಭಿಷಿಕ್ತನಾದ ಯಾಜಕನು ತಪ್ಪುಮಾಡಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಅಭಿಷಿಕ್ತನಾದ ಯಾಜಕನೇ ಅಂಥ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಕಳಂಕರಹಿತವಾದ ಪ್ರಾಯದ ಹೋರಿಯೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನೂ ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:3
32 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಮೋಶೆಯು ಆರೋನನಿಗೆ ಹೀಗೆಂದನು; “ಒಂದು ಎಳೆಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊ. ಆ ಪಶುಗಳಲ್ಲಿ ಏನೂ ದೋಷವಿರಬಾರದು. ಹೋರಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಟಗರನ್ನು ಸರ್ವಾಂಗಹೋಮವಾಗಿಯೂ ಯೆಹೋವನಿಗೆ ಸಮರ್ಪಿಸು.


ಆ ಪಾಪದ ಕುರಿತು ಅವರಿಗೆ ತಿಳಿದುಬಂದರೆ ಆಗ ಅವರು ಒಂದು ಹೋರಿಯನ್ನು ಇಡೀ ಜನಾಂಗದ ಪಾಪಪರಿಹಾರ ಮಾಡುವ ಸಮರ್ಪಣೆಯಾಗಿ ಅರ್ಪಿಸಬೇಕು. ಅವರು ಹೋರಿಯನ್ನು ದೇವದರ್ಶನಗುಡಾರಕ್ಕೆ ತರಬೇಕು.


ತಾನೂ ಬಲಹೀನನಾಗಿರುವುದರಿಂದ ಅವನು ಮನುಷ್ಯರ ಪಾಪಗಳಿಗಾಗಿಯೂ ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಗಳನ್ನು ಅರ್ಪಿಸುತ್ತಾನೆ.


ಆಮೇಲೆ ಸೆರೆಯಿಂದ ಹಿಂತಿರುಗಿಬಂದ ಯೆಹೂದ್ಯರು ಇಸ್ರೇಲ್ ದೇವರಿಗೆ ಇಸ್ರೇಲರ ಎಲ್ಲಾ ಕುಲಗಳವರಿಗಾಗಿ ಹನ್ನೆರಡು ಹೋರಿಗಳನ್ನು, ತೊಂಭತ್ತಾರು ಟಗರುಗಳನ್ನು, ಎಪ್ಪತ್ತೇಳು ಗಂಡು ಕುರಿಗಳನ್ನು ಮತ್ತು ಹನ್ನೆರಡು ಗಂಡು ಆಡುಗಳನ್ನು ಸರ್ವಾಂಗಹೋಮ ಯಜ್ಞವನ್ನಾಗಿಯೂ ಮತ್ತು ಪಾಪಪರಿಹಾರಕ ಯಜ್ಞವನ್ನಾಗಿಯೂ ಸಮರ್ಪಿಸಿದರು.


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


ಚಾದೋಕನ ಸಂತತಿಯ ಯಾಜಕರ ಪಾಪಪರಿಹಾರಕ್ಕಾಗಿ ನೀನು ಒಂದು ಎಳೆ ಹೋರಿಯನ್ನು ಅರ್ಪಿಸು. ಇವರು ಲೇವಿಕುಲದ ಯಾಜಕರು. ಇವರು ನನಗೆ ಕಾಣಿಕೆಗಳನ್ನು ಅರ್ಪಿಸುವ ಸೇವೆ ಮಾಡುವವರಾಗಿರುತ್ತಾರೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು.


ಬಳಿಕ ಹೋರಿಯ ಮಾಂಸ, ಚರ್ಮ, ಇತರ ಭಾಗಗಳನ್ನು ತೆಗೆದುಕೊಂಡು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಟ್ಟುಬಿಡು. ಇದು ಯಾಜಕರ ಪಾಪಗಳನ್ನು ಪರಿಹರಿಸುವ ಕಾಣಿಕೆಯಾಗಿದೆ.


ಅಭಿಷೇಕತೈಲವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಸುರಿ.


“ತರುವಾಯ ಲೇವಿಯರು ಸರ್ವಾಂಗಹೋಮಕ್ಕಾಗಿ ಒಂದು ಎಳೆಹೋರಿಯನ್ನು ಮತ್ತು ಅದರೊಡನೆ ಸಮರ್ಪಿಸಬೇಕಾದ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಯಹಿಟ್ಟನ್ನು ತೆಗೆದುಕೊಂಡು ಬರಬೇಕು; ನೀನು ಅವರಿಂದ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಎಳೆಹೋರಿಯನ್ನು ತೆಗೆದುಕೊಳ್ಳಬೇಕು.


“ಬಳಿಕ ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ಅರ್ಪಿಸುವನು. ಆರೋನನು ತನಗಾಗಿಯೂ ತನ್ನ ಕುಟುಂಬದವರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು. ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ವಧಿಸುವನು.


ಬಳಿಕ ಆರೋನನು ಪಾಪಪರಿಹಾರಕ ಯಜ್ಞಕ್ಕೋಸ್ಕರ ಹೋರಿಯನ್ನು ಅರ್ಪಿಸಬೇಕು. ಈ ಪಾಪಪರಿಹಾರಕ ಯಜ್ಞವು ಅವನಿಗಾಗಿ ಇರುತ್ತದೆ. ಆರೋನನು ತನಗೂ ತನ್ನ ಕುಟುಂಬದವರಿಗೂ ಪ್ರಾಯಶ್ಚಿತ್ತ ಮಾಡಲು ಇದನ್ನು ಮಾಡಬೇಕು.


ಬಳಿಕ ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಆರೋನನ ತಲೆಗೆ ಹೊಯಿದು ಅವನನ್ನು ಪವಿತ್ರಗೊಳಿಸಿದನು.


ಅವನು ದೋಷಪರಿಹಾರಕ್ಕಾಗಿ ಹೆಣ್ಣು ಕುರಿಮರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯಜ್ಞವಾಗಿ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


“ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.”


ಆತನು ಒಂದೇ ಒಂದು ಸಾರಿ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿದನು. ಆತನು ಹೋತಗಳ ಮತ್ತು ಹೋರಿಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತದಿಂದಲೇ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿ ನಮಗೆ ನಿತ್ಯಸ್ವಾತಂತ್ರ್ಯವನ್ನು ತಂದುಕೊಟ್ಟನು.


ಬಳಿಕ ಅವನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗೆ ಹೋಗಬೇಕು.


ಅಧಿಪತಿಯು ತನ್ನ ಪಾಪದ ಕುರಿತು ತಿಳಿದುಕೊಂಡರೆ, ಅಂಗದೋಷವಿಲ್ಲದ ಹೋತವನ್ನು ತರಬೇಕು. ಅದು ಅವನ ಕಾಣಿಕೆಯಾಗಿರುವುದು.


ಆ ವ್ಯಕ್ತಿ ತನ್ನ ಪಾಪದ ಕುರಿತು ತಿಳಿದುಕೊಂಡರೆ, ಆಗ ಅವನು ಅಂಗದೋಷವಿಲ್ಲದ ಒಂದು ಆಡನ್ನು ತರಬೇಕು. ಅದು ಅವನ ಪಾಪಪರಿಹಾರಕ ಯಜ್ಞವಾಗಿದೆ. ಅವನು ತಾನು ಮಾಡಿದ ಪಾಪಕ್ಕಾಗಿ ಆಡನ್ನು ತರಬೇಕು.


ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.


ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಆಡುಗಳನ್ನೂ ತಂದರು. ಈ ಪ್ರಾಣಿಗಳನ್ನೆಲ್ಲಾ ಇಡೀ ಯೆಹೂದ ಪ್ರಾಂತ್ಯದಲ್ಲಿರುವ ಪ್ರಜೆಯವರಿಗಾಗಿ, ದೇವಾಲಯದ ಶುದ್ಧೀಕರಣಕ್ಕಾಗಿ ಮತ್ತು ಯೆಹೂದ ರಾಜ್ಯಕ್ಕಾಗಿ ಪಾಪಪರಿಹಾರ ಯಜ್ಞವಾಗಿ ಅರ್ಪಿಸಿದರು. ಅರಸನಾದ ಹಿಜ್ಕೀಯನು ಆರೋನನ ಸಂತತಿಯವರಾದ ಯಾಜಕರಿಗೆ ಆ ಪಶುಗಳನ್ನು ಯೆಹೋವನ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಮಾಡಲು ಆಜ್ಞಾಪಿಸಿದನು.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.


ಆರೋನನ ವಂಶದವರಾದ ಗಂಡಸರೆಲ್ಲರೂ ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳನ್ನು ತಿನ್ನಬಹುದು. ಇದು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿದೆ. ಈ ಕಾಣಿಕೆಗಳಿಗೆ ತಗಲಿದ್ದೆಲ್ಲಾ ಪವಿತ್ರವಾಗುತ್ತವೆ.”


ಇಸ್ರೇಲರಿಗೆ ಹೀಗೆ ಹೇಳು: ‘ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ತೆಗೆದುಕೊಳ್ಳಿರಿ; ಸರ್ವಾಂಗಹೋಮಕ್ಕಾಗಿ ಕರುವನ್ನೂ ಕುರಿಮರಿಯನ್ನೂ ತೆಗೆದುಕೊಳ್ಳಿರಿ. ಕರುವೂ ಕುರಿಮರಿಯೂ ಒಂದು ವರ್ಷದ್ದಾಗಿರಬೇಕು. ಆ ಪ್ರಾಣಿಗಳಲ್ಲಿ ಯಾವ ದೋಷವಿರಬಾರದು.


“ದೋಷಪರಿಹಾರಕ ದಿನದಲ್ಲಿ ಆರೋನನು ಮಹಾ ಪವಿತ್ರಸ್ಥಳದೊಳಗೆ ಪ್ರವೇಶಿಸುವ ಮೊದಲು ಪಾಪಪರಿಹಾರಕ ಯಜ್ಞವಾಗಿ ಹೋರಿಯನ್ನೂ ಸರ್ವಾಂಗಹೋಮವಾಗಿ ಟಗರನ್ನೂ ಅರ್ಪಿಸಬೇಕು.


“ಆರೋನನು ಇಸ್ರೇಲರಿಂದ ಪಾಪಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು.


ಬಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕಯಜ್ಞ, ಪಾಪಪರಿಹಾರಕಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನ್ನು ಈ ಮೇಜುಗಳ ಮೇಲೆ ಕೊಲ್ಲುತ್ತಿದ್ದರು.


ಅನಂತರ ಅವನು ಪವಿತ್ರಸ್ಥಳಕ್ಕೆ ತಿರುಗಿ ಹೋಗಬಹುದು. ಆದರೆ ಒಳಗಿನ ಪ್ರಾಕಾರದೊಳಗೆ ಹೋಗುವ ದಿನದಂದು ಯಾಜಕನು ಮೊದಲು ತನಗಾಗಿ ಪಾಪಪರಿಹಾರಕಯಜ್ಞವನ್ನು ಸಮರ್ಪಿಸಿಕೊಳ್ಳಬೇಕು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು