Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:33 - ಪರಿಶುದ್ದ ಬೈಬಲ್‌

33 ಅವನು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಅದನ್ನು ಸರ್ವಾಂಗಹೋಮದ ಯಜ್ಞಪಶುಗಳನ್ನು ವಧಿಸುವ ಸ್ಥಳದಲ್ಲಿ ಪಾಪಪರಿಹಾರಕಯಜ್ಞವಾಗಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವನು ಅದರ ತಲೆಯ ಮೇಲೆ ಕೈಯಿಟ್ಟನಂತರ ದಹನ ಬಲಿಪ್ರಾಣಿಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಾರ್ಥವಾಗಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವನು ಅದರ ತಲೆಯ ಮೇಲೆ ಕೈಯಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಧಳದಲ್ಲೇ ಅದನ್ನು ದೋಷಪರಿಹಾರಾರ್ಥವಾಗಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ಪಾಪ ಪರಿಹಾರದ ಬಲಿಯ ತಲೆಯ ಮೇಲೆ ತಮ್ಮ ಕೈಯನ್ನು ಇಟ್ಟು, ದೋಷಪರಿಹಾರ ಬಲಿಯಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:33
7 ತಿಳಿವುಗಳ ಹೋಲಿಕೆ  

ಅಭಿಷಿಕ್ತನಾದ ಯಾಜಕನು ಹೋರಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.


ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು.


“ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.


ಆರೋನನ ವಂಶದವರಾದ ಗಂಡಸರೆಲ್ಲರೂ ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳನ್ನು ತಿನ್ನಬಹುದು. ಇದು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿದೆ. ಈ ಕಾಣಿಕೆಗಳಿಗೆ ತಗಲಿದ್ದೆಲ್ಲಾ ಪವಿತ್ರವಾಗುತ್ತವೆ.”


ಯಾಜಕನು ಸರ್ವಾಂಗಹೋಮ ಸಮರ್ಪಣೆಗಳ ಪಶುವನ್ನು ವಧಿಸುವ ಸ್ಥಳದಲ್ಲಿಯೇ ದೋಷಪರಿಹಾರಕ ಪಶುವನ್ನು ವಧಿಸಬೇಕು. ಬಳಿಕ ಯಾಜಕನು ದೋಷಪರಿಹಾರಕ ಯಜ್ಞದ ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಬೇಕು.


ಆ ಬಳಿಕ ಯಾಜಕರು ಹೋತಗಳನ್ನು ಅರಸನ ಮತ್ತು ಸೇರಿಬಂದ ಜನಗಳ ಮುಂದೆ ಪಾಪಪರಿಹಾರಕ ಯಜ್ಞಕ್ಕಾಗಿ ತಂದರು. ಯಾಜಕರು ಅವುಗಳ ಮೇಲೆ ಕೈಯಿಟ್ಟು ವಧಿಸಿದರು. ಅದರ ರಕ್ತವನ್ನು ಯಜ್ಞವೇದಿಕೆಯ ಮೇಲೆ ಪಾಪಪರಿಹಾರಕ ಯಜ್ಞವಾಗಿ ಸಮರ್ಪಿಸಿದರು. ದೇವರು ಇಸ್ರೇಲರ ಪಾಪಗಳನ್ನು ಕ್ಷಮಿಸುವಂತೆ ಅವರು ಹೀಗೆ ಮಾಡಿದರು. ಸರ್ವಾಂಗಹೋಮಗಳನ್ನೂ ಪಾಪಪರಿಹಾರಕ ಯಜ್ಞಗಳನ್ನೂ ಇಸ್ರೇಲಿನ ಸಮಸ್ತ ಜನರಿಗಾಗಿ ಅರ್ಪಿಸಬೇಕೆಂದು ರಾಜನು ಆಜ್ಞಾಪಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು