Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:5 - ಪರಿಶುದ್ದ ಬೈಬಲ್‌

5 ಬಳಿಕ ಅವನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅಭಿಷಿಕ್ತನಾದ ಯಾಜಕನು ಆ ಹೋರಿಯ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:5
8 ತಿಳಿವುಗಳ ಹೋಲಿಕೆ  

ಅಲ್ಲದೆ ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದಲ್ಲಿ ತನ್ನ ಬೆರಳಿನಿಂದ ಚಿಮಿಕಿಸಬೇಕು. ಕೃಪಾಸನದ ಮುಂಭಾಗದಲ್ಲಿ ಅವನು ತನ್ನ ಬೆರಳಿನಿಂದ ರಕ್ತವನ್ನು ಏಳು ಬಾರಿ ಚಿಮಿಕಿಸುವನು.


ಬಳಿಕ ಅವನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.


ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


ಬಳಿಕ ಆರೋನನು ತನ್ನ ಬೆರಳಿನಿಂದ ಸ್ವಲ್ಪ ರಕ್ತವನ್ನು ಯಜ್ಞವೇದಿಕೆಯ ಮೇಲೆ ಏಳು ಸಲ ಚಿಮಿಕಿಸುವನು. ಹೀಗೆ ಆರೋನನು ಯಜ್ಞವೇದಿಕೆಯನ್ನು ಇಸ್ರೇಲರಿಂದ ಅದಕ್ಕುಂಟಾದ ಅಶುದ್ಧತ್ವದಿಂದ ದೂರಮಾಡಿ ಪರಿಶುದ್ಧಗೊಳಿಸುವನು.


“ಅಭಿಷಿಕ್ತನಾದ ಯಾಜಕನು ತಪ್ಪುಮಾಡಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಅರ್ಪಿಸಬೇಕು.


ಯಾಜಕನ ಪ್ರತಿಯೊಂದು ಧಾನ್ಯಸಮರ್ಪಣೆ ಸಂಪೂರ್ಣವಾಗಿ ಹೋಮವಾಗಬೇಕು. ಅದನ್ನು ತಿನ್ನಲೇಬಾರದು.”


“ಬಳಿಕ ಆರೋನನು ಜನರಿಗೋಸ್ಕರವಾಗಿರುವ ಪಾಪಪರಿಹಾರಕ ಪಶುವಾದ ಹೋತವನ್ನು ವಧಿಸಬೇಕು. ಆರೋನನು ಈ ಹೋತದ ರಕ್ತವನ್ನು ತೆರೆಯ ಹಿಂಭಾಗದಲ್ಲಿರುವ ಕೋಣೆಗೆ ತೆಗೆದುಕೊಂಡು ಬರಬೇಕು. ಆರೋನನು ಹೋರಿಯ ರಕ್ತದಿಂದ ಮಾಡಿದಂತೆ ಹೋತದ ರಕ್ತದಿಂದಲೂ ಮಾಡಬೇಕು. ಆರೋನನು ಹೋತದ ರಕ್ತವನ್ನು ಕೃಪಾಸನದ ಮೇಲೂ ಮತ್ತು ಕೃಪಾಸನದ ಮುಂಭಾಗದಲ್ಲಿಯೂ ಚಿಮಿಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು