Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:6 - ಪರಿಶುದ್ದ ಬೈಬಲ್‌

6 ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಮಹಾಪವಿತ್ರಸ್ಥಳದ ಪರದೆಯ ಮುಂಭಾಗದಲ್ಲಿರುವ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ರಕ್ತದಲ್ಲಿ ಬೆರಳನ್ನು ಅದ್ದಿ ಮಹಾಪವಿತ್ರ ಸ್ಥಾನದ ಮುಂದಿನ ತೆರೆಯ ಎದುರಿಗೆ, ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರಲ್ಲಿ ಬೆರಳನ್ನು ಅದ್ದಿ ಮಹಾಪವಿತ್ರಸ್ಥಾನದ ಮುಂದಣ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿವಿುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ, ಯೆಹೋವ ದೇವರ ಮುಂದಿನ ಪವಿತ್ರ ಸ್ಥಳದ ತೆರೆಯ ಮುಂದೆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:6
22 ತಿಳಿವುಗಳ ಹೋಲಿಕೆ  

ಯೆಹೋಶುವನು ಜನರೊಂದಿಗೆ ಮಾತನಾಡುವದನ್ನು ಮುಗಿಸಿದ ಮೇಲೆ, ಏಳು ಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಊದುತ್ತಾ ಯೆಹೋವನ ಮುಂದೆ ನಡೆಯಲು ಪ್ರಾರಂಭಿಸಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ಅವರನ್ನು ಹಿಂಬಾಲಿಸಿದರು.


ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ನೀವು ಏಳುಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು.


ನಾನು ನಿಜವಾಗಿ ನನ್ನ ಕೋಪವನ್ನು ತೋರಿಸುವೆನು. ಹೌದು, ನಾನೇ ನಿಮ್ಮ ಪಾಪಗಳಿಗಾಗಿ ನಿಮ್ಮನ್ನು ಏಳರಷ್ಟಾಗಿ ದಂಡಿಸುವೆನು.


ಆಗ ನಾನು ಸಹ ನಿಮಗೆ ವಿರೋಧವಾಗಿ ನಡೆಯುವೆನು. ಹೌದು, ನಾನೇ ನಿಮ್ಮನ್ನು ನಿಮ್ಮ ಪಾಪಗಳಿಗಾಗಿ ಏಳರಷ್ಟಾಗಿ ದಂಡಿಸುವೆನು.


“ಇಷ್ಟಾದರೂ ನೀವು ನನಗೆ ವಿಧೇಯರಾಗದಿದ್ದರೆ ನಿಮ್ಮ ಪಾಪಗಳಿಗಾಗಿ ಇನ್ನೂ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.


ಬಳಿಕ ಆರೋನನು ತನ್ನ ಬೆರಳಿನಿಂದ ಸ್ವಲ್ಪ ರಕ್ತವನ್ನು ಯಜ್ಞವೇದಿಕೆಯ ಮೇಲೆ ಏಳು ಸಲ ಚಿಮಿಕಿಸುವನು. ಹೀಗೆ ಆರೋನನು ಯಜ್ಞವೇದಿಕೆಯನ್ನು ಇಸ್ರೇಲರಿಂದ ಅದಕ್ಕುಂಟಾದ ಅಶುದ್ಧತ್ವದಿಂದ ದೂರಮಾಡಿ ಪರಿಶುದ್ಧಗೊಳಿಸುವನು.


ಅಲ್ಲದೆ ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದಲ್ಲಿ ತನ್ನ ಬೆರಳಿನಿಂದ ಚಿಮಿಕಿಸಬೇಕು. ಕೃಪಾಸನದ ಮುಂಭಾಗದಲ್ಲಿ ಅವನು ತನ್ನ ಬೆರಳಿನಿಂದ ರಕ್ತವನ್ನು ಏಳು ಬಾರಿ ಚಿಮಿಕಿಸುವನು.


ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ತಲೆಗೆ ಹಚ್ಚುವನು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧನನ್ನಾಗಿ ಮಾಡುವನು.


ತನ್ನ ಎಡಗೈಯಲ್ಲಿರುವ ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ಏಳುಸಲ ತನ್ನ ಬಲಗೈಯ ಬೆರಳಿನಿಂದ ಚಿಮಿಕಿಸುವನು.


ಬಳಿಕ ಯಾಜಕನು ತನ್ನ ಬಲಗೈಯ ಬೆರಳನ್ನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ಎಣ್ಣೆಯನ್ನು ಏಳುಸಲ ಚಿಮಿಕಿಸಬೇಕು.


ಆರೋನನ ಪುತ್ರರು ಅದರ ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನ ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯಜ್ಞವೇದಿಕೆಯ ಮೂಲೆಗಳಿಗೆ ಹಚ್ಚಿದನು. ಬಳಿಕ ಆರೋನನು ರಕ್ತವನ್ನು ಯಜ್ಞವೇದಿಕೆಯ ಬುಡದಲ್ಲಿ ಸುರಿದನು.


ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು.


ಯಾಜಕನು ಪಾಪಪರಿಹಾರಕಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಕುರಿಮರಿಯ ರಕ್ತವನ್ನೆಲ್ಲಾ ವೇದಿಕೆಯ ಬುಡದಲ್ಲಿ ಸುರಿಯಬೇಕು.


ಬಳಿಕ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಆಡಿನ ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು.


ಯಾಜಕನು ಪಾಪಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದು,


ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ತೆರೆಯ ಮುಂದೆ ಏಳು ಸಾರಿ ಚಿಮಿಕಿಸಬೇಕು.


ಬಳಿಕ ಅವನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.


“ಅದಲ್ಲದೆ, ಏಳು ವರ್ಷಗಳ ಏಳು ಗುಂಪುಗಳನ್ನು ಲೆಕ್ಕಿಸಬೇಕು. ಈ ಏಳು ಗುಂಪುಗಳು ಸೇರಿ ನಲವತ್ತೊಂಭತ್ತು ವರ್ಷಗಳಾಗಿರುವವು. ಆ ಸಮಯದಲ್ಲಿ ಭೂಮಿಗೆ ಏಳು ವರ್ಷಗಳ ವಿಶ್ರಾಂತಿಯಿರುವುದು.


ಬಳಿಕ ಮೋಶೆಯು ಪವಿತ್ರಪೆಟ್ಟಿಗೆಯನ್ನು ಪವಿತ್ರಗುಡಾರದೊಳಗೆ ತಂದನು. ಅದನ್ನು ಸಂರಕ್ಷಿಸುವುದಕ್ಕಾಗಿ ಸರಿಯಾದ ಸ್ಥಳದಲ್ಲಿ ಪರದೆಯನ್ನು ಹಾಕಿದನು. ಹೀಗೆ ಒಡಂಬಡಿಕೆ ಪೆಟ್ಟಿಗೆಯನ್ನು ಪರದೆಯ ಹಿಂಭಾಗದಲ್ಲಿರಿಸಿ ಸಂರಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.


ಬಳಿಕ ಮೋಶೆಯು ಚಿನ್ನದ ವೇದಿಕೆಯನ್ನು ದೇವದರ್ಶನಗುಡಾರದೊಳಗೆ ಇರಿಸಿದನು. ಅವನು ವೇದಿಕೆಯನ್ನು ಪರದೆಯ ಮುಂಭಾಗದಲ್ಲಿ ಇರಿಸಿದನು.


ಮೋಶೆಯು ಅಭಿಷೇಕತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ವೇದಿಕೆಯ ಮೇಲೆ ಏಳು ಸಲ ಚಿಮಿಕಿಸಿದನು. ಮೋಶೆಯು ತೈಲವನ್ನು ವೇದಿಕೆಯ ಮೇಲೆ, ಅದರ ಎಲ್ಲಾ ಉಪಕರಣಗಳ ಮೇಲೆ ಚಿಮಿಕಿಸಿದನು. ಮೋಶೆಯು ತೈಲವನ್ನು ಗಂಗಾಳ ಮತ್ತು ಅದರ ಪೀಠದ ಮೇಲೂ ಚಿಮಿಕಿಸಿದನು. ಈ ರೀತಿಯಾಗಿ ಮೋಶೆ ಅವುಗಳನ್ನು ಪವಿತ್ರಗೊಳಿಸಿದನು.


ಯಾಜಕನು ಚರ್ಮರೋಗವಿದ್ದ ವ್ಯಕ್ತಿಯ ಮೇಲೆ ರಕ್ತವನ್ನು ಏಳುಸಲ ಚಿಮಿಕಿಸಬೇಕು. ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಬಳಿಕ ಯಾಜಕನು ಬಯಲಿಗೆ ಹೋಗಿ ಜೀವಂತವಾಗಿರುವ ಪಕ್ಷಿಯನ್ನು ಬಿಟ್ಟುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು