Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:8 - ಪರಿಶುದ್ದ ಬೈಬಲ್‌

8 ಅವನು ದೋಷಪರಿಹಾರಕ ಯಜ್ಞಕ್ಕಾಗಿ ತಂದಿರುವ ಹೋರಿಯ ಕೊಬ್ಬನ್ನೆಲ್ಲಾ ತೆಗೆಯಬೇಕು. ಅವನು ಅದರ ಒಳಗಿನ ಭಾಗಗಳ ಮೇಲೆ ಮತ್ತು ಅವುಗಳ ಸುತ್ತಲೂ ಇರುವ ಕೊಬ್ಬನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ದೋಷಪರಿಹಾರಕ ಬಲಿಹೋರಿಯ ಕೊಬ್ಬನ್ನೆಲ್ಲಾ, ಅಂದರೆ ಕರುಳ ಸುತ್ತಲಿನ ಕೊಬ್ಬನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ದೋಷ ಪರಿಹಾರಕಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ವಪೆಯನ್ನೂ ಕರುಳುಗಳ ಮೇಲಣ ಕೊಬ್ಬನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಪಾಪ ಪರಿಹಾರದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು. ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:8
12 ತಿಳಿವುಗಳ ಹೋಲಿಕೆ  

ಯೇಸು ಮಾತನ್ನು ಮುಂದುವರಿಸಿ, “ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ನನ್ನನ್ನು ಈ ಸಂಕಟ ಕಾಲದಿಂದ ರಕ್ಷಿಸು ಎನ್ನಬೇಕೇ?’ ಇಲ್ಲ! ಸಂಕಟಪಡುವುದಕ್ಕೋಸ್ಕರವೇ ನಾನು ಬಂದಿದ್ದೇನೆ.


ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.


ಬಳಿಕ ಅವನು ಪಾಪಪರಿಹಾರಕ ಯಜ್ಞದ ಕೊಬ್ಬನ್ನು ವೇದಿಕೆಯ ಮೇಲೆ ಹೋಮಮಾಡುವನು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಹೋತದ ಕೊಬ್ಬನ್ನೆಲ್ಲಾ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಸಮಾಧಾನಯಜ್ಞವಾಗಿದೆ. ಕೊಬ್ಬನ್ನು ಹೋಮಮಾಡುವಂತೆ ಅದನ್ನು ಹೋಮಮಾಡಬೇಕು. ಹೀಗೆ ಯಾಜಕನು ಅಧಿಪತಿಯನ್ನು ಶುದ್ಧಗೊಳಿಸುವನು. ಆಗ ದೇವರು ಆ ಅಧಿಪತಿಯನ್ನು ಕ್ಷಮಿಸುವನು.


ತರುವಾಯ ಯಾಜಕನು ಪಶುವಿನಿಂದ ಕೊಬ್ಬನ್ನೆಲ್ಲಾ ತೆಗೆದು ಅದನ್ನು ವೇದಿಕೆಯ ಮೇಲೆ ಹೋಮಮಾಡಬೇಕು.


ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು