Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:1 - ಪರಿಶುದ್ದ ಬೈಬಲ್‌

1 “ನ್ಯಾಯಾಧಿಕಾರಿಯು ತಿಳಿಸಬೇಕೆಂದು ಕೇಳಿದರೂ ಒಬ್ಬನು ತಾನು ಕಂಡದ್ದನ್ನಾಗಲಿ ಕೇಳಿದ್ದನ್ನಾಗಲಿ ತಿಳಿಸದೆ ಹೋದರೆ ಅವನು ಪಾಪಕ್ಕೆ ಗುರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಈ ಕೆಳಕಂಡ ಸಂದರ್ಭಗಳಲ್ಲಿ ಪಾಪಪರಿಹಾರಕ ಬಲಿಗಳನ್ನು ಒಪ್ಪಿಸಬೇಕಾಗುತ್ತದೆ: ಒಬ್ಬನು ತಾನು ಕಂಡು ಕೇಳಿದ್ದಕ್ಕೆ ನ್ಯಾಯಸ್ಥಾನದಲ್ಲಿ ಸಾಕ್ಷಿಹೇಳಬೇಕೆಂದು ಅಧಿಕೃತವಾದ ಕರೆಯಿದ್ದರೂ ಸಾಕ್ಷಿ ಹೇಳದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ ‘ಯಾವನಾದರೂ ಆಣೆ ಇಡುವುದನ್ನು ಕೇಳಿ, ಸಾಕ್ಷಿಯಾಗಿದ್ದು, ಪಾಪಮಾಡಿದರೆ, ಅವನು ಅದನ್ನು ಕಂಡೂ ಇಲ್ಲವೆ ತಿಳಿದೂ ಅವನು ಅದನ್ನು ಹೇಳದಿದ್ದರೆ, ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:1
22 ತಿಳಿವುಗಳ ಹೋಲಿಕೆ  

“ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದಾದರೊಂದನ್ನು ಮಾಡಿ ದೋಷಕ್ಕೆ ಗುರಿಯಾಗಿದ್ದರೆ, ಅದು ಅವನಿಗೆ ತಿಳಿದಿಲ್ಲದಿದ್ದರೂ ಅವನು ಆ ಪಾಪಫಲವನ್ನು ಅನುಭವಿಸಬೇಕು.


ಕಳ್ಳನ ಸಂಗಡಿಗನು ತನಗೆ ತಾನೆ ಕಡುವೈರಿ. ಸಾಕ್ಷಿ ಹೇಳದ ಜನರಿಗೆ ಬರತಕ್ಕ ಶಾಪದ ಬಗ್ಗೆ ಕೇಳಿದರೂ ಅವನು ಹೇಳುವುದಿಲ್ಲ.


ಆದರೆ ಯೇಸು ಮೌನವಾಗಿದ್ದನು. ಪ್ರಧಾನಯಾಜಕನು ಮತ್ತೆ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದೇನೆ, ನೀನು ದೇವಕುಮಾರನಾದ ಕ್ರಿಸ್ತನೋ? ನಮಗೆ ತಿಳಿಸು” ಎಂದನು.


ಒಬ್ಬನು ಅದನ್ನು ಮೂರನೆಯ ದಿನದಲ್ಲಿ ತಿಂದರೆ ಅವನು ಪಾಪಮಾಡಿದ ದೋಷಿಯಾಗಿರುವನು. ಯಾಕೆಂದರೆ ಯೆಹೋವನಿಗೆ ಮೀಸಲಾದ ಪವಿತ್ರ ವಸ್ತುಗಳ ವಿಷಯದಲ್ಲಿ ಅವನಿಗೆ ಗೌರವವಿಲ್ಲ; ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.


ಒಬ್ಬನು ತನ್ನ ಸಮಾಧಾನಯಜ್ಞದಲ್ಲಿ ಉಳಿದದ್ದನ್ನು ಮೂರನೆಯ ದಿನದಲ್ಲಿ ತಿಂದರೆ, ಯೆಹೋವನು ಅವನ ವಿಷಯದಲ್ಲಿ ಸಂತೋಷಗೊಳ್ಳುವುದಿಲ್ಲ. ಯೆಹೋವನು ಆ ಯಜ್ಞವನ್ನು ಅವನ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಆ ಯಜ್ಞವು ಅಸಹ್ಯವಸ್ತುವಾಗುವುದು. ಆ ಮಾಂಸವನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸುವನು.


ಎಲ್ಲಾ ಪ್ರಾಣಗಳು ನನ್ನವೇ. ತಂದೆಯ ಪ್ರಾಣವೂ ಮಗನ ಪ್ರಾಣವೂ ನನ್ನವೇ. ಪಾಪಮಾಡುವವನು ಮಾತ್ರ ಸಾಯುವನು.


“ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಏನಾದರೂ ಕೆಟ್ಟದ್ದನ್ನು ಮಾಡಿದರೆ, ಅವನನ್ನು ಈ ಯಜ್ಞವೇದಿಕೆಯ ಬಳಿಗೆ ಕರೆದು ತರುತ್ತಾರೆ. ಆ ವ್ಯಕ್ತಿಯು ತಪ್ಪಿತಸ್ಥನಲ್ಲದಿದ್ದರೆ, ಅವನು ಬಂದು ತಾನು ನಿರಪರಾಧಿಯೆಂದು ಪ್ರಮಾಣ ಮಾಡುತ್ತಾನೆ.


ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು.


“ಒಬ್ಬನು ತನ್ನ ಸಹೋದರಿಯನ್ನಾಗಲಿ ತನ್ನ ತಂದೆಯ ಅಥವಾ ತಾಯಿಯ ಮಗಳನ್ನಾಗಲಿ ಮದುವೆಯಾಗಿ ಲೈಂಗಿಕ ಸಂಬಂಧ ಬೆಳೆಸಿದರೆ, ಅದು ಅವಮಾನಕರವಾದ ಕಾರ್ಯವಾಗಿದೆ! ಅವರಿಗೆ ಬಹಿರಂಗವಾಗಿ ಶಿಕ್ಷೆಯಾಗಬೇಕು. ಅವರನ್ನು ಅವರ ಕುಲದಿಂದ ತೆಗೆದುಹಾಕಬೇಕು. ತನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಿದ ಪುರುಷನಿಗೆ ಅವನು ಮಾಡಿದ ಪಾಪಕ್ಕಾಗಿ ಶಿಕ್ಷೆಯಾಗಬೇಕು.


ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳದೆಯೂ ಸ್ನಾನ ಮಾಡಿಕೊಳ್ಳದೆಯೂ ಹೋದರೆ ಆಗ ಅವನು ಪಾಪಮಾಡಿದ ದೋಷಿಯಾಗಿರುವನು.”


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ತಂದೆಯು ಹೊತ್ತುಕೊಳ್ಳುವದಿಲ್ಲ. ಒಬ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತ್ವವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ.


ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.


ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.


ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.


ಆಗ ಅಹಾಬನು ಮೀಕಾಯೆಹುವಿಗೆ, “ನೀನು ಯೆಹೋವನ ಹೆಸರಿನಲ್ಲಿ ನನಗೆ ಸತ್ಯವನ್ನೇ ತಿಳಿಸಬೇಕೆಂದು ಎಷ್ಟೋ ಸಲ ನಿನ್ನಿಂದ ಪ್ರಮಾಣ ಮಾಡಿಸಿರುತ್ತೇನೆ” ಎಂದು ಹೇಳಿದಾಗ ಮೀಕಾಯೆಹುವು,


ಆದರೆ ಅಹಾಬನು, “ಯೆಹೋವನ ಶಕ್ತಿಯಿಂದ ನೀನು ಮಾತನಾಡುತ್ತಿಲ್ಲ. ನೀನು ನಿನ್ನ ಸ್ವಂತ ಮಾತುಗಳನ್ನು ಹೇಳುತ್ತಿರುವೆ. ನನಗೆ ನೀನು ನಿಜವನ್ನು ಹೇಳು! ನಾನು ನಿನಗೆ ಎಷ್ಟು ಸಲ ಹೇಳಬೇಕು? ಯೆಹೋವನು ತಿಳಿಸುವುದನ್ನೇ ನನಗೆ ಹೇಳು!” ಎಂದು ಕೇಳಿದನು.


ಮೀಕನು ತನ್ನ ತಾಯಿಗೆ, “ಅಮ್ಮಾ, ಯಾರೋ ನಿನ್ನ ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ಕದ್ದಿದ್ದರಲ್ಲಾ, ನಿನಗೆ ನೆನಪಿದೆಯಾ? ನೀನು ಅದರ ಸಲುವಾಗಿ ಶಾಪಹಾಕುವದನ್ನು ನಾನು ಕೇಳಿದ್ದೆ. ನಾನು ಅದನ್ನು ತೆಗೆದುಕೊಂಡಿದ್ದೆ. ಇಗೋ ಆ ಬೆಳ್ಳಿ ನನ್ನ ಹತ್ತಿರ ಇದೆ” ಎಂದು ಹೇಳಿದನು. ಅವನ ತಾಯಿಯು ಅವನಿಗೆ, “ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದಳು.


“ಒಬ್ಬನು ಯೆಹೋವನ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮೀರಿ ನಡೆದು ತಿಳಿಯದೆ ತಪ್ಪು ಮಾಡಿದರೆ ಅವನು ಅಂಗದೋಷವಿಲ್ಲದ ಟಗರನ್ನು ತರಬೇಕು. ಇದು ಅವನಿಗಾಗಿ ಯೆಹೋವನಿಗೆ ಸಮರ್ಪಣೆಯಾಗುವ ದೋಷಪರಿಹಾರಕ ಯಜ್ಞ. ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಟಗರಿನ ಬೆಲೆಯನ್ನು ಗೊತ್ತುಮಾಡಬೇಕು.”


“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:


ಆ ನೆರೆಯವನು ಆ ಪಶುವನ್ನು ಕದ್ದಿಲ್ಲದ್ದಿದ್ದರೆ ತಾನು ಕದ್ದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಬೇಕು. ಪಶುವಿನ ಮಾಲೀಕನು ಈ ಪ್ರಮಾಣವನ್ನು ಸ್ವೀಕರಿಸಬೇಕು. ನೆರೆಯವನು ಮಾಲೀಕನಿಗೆ ಪಶುವಿಗಾಗಿ ಈಡು ಕೊಡಬೇಕಾಗಿಲ್ಲ.


ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನ್ನು ಶಪಿಸಿದ್ದರಿಂದ ಅದು ಬರಡು ಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತುಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆ ಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು