ಯಾಜಕಕಾಂಡ 5:10 - ಪರಿಶುದ್ದ ಬೈಬಲ್10 ತರುವಾಯ ಯಾಜಕನು ಎರಡನೆಯ ಪಕ್ಷಿಯನ್ನು ಸರ್ವಾಂಗಹೋಮದ ವಿಧಿಗಳಿಗನುಸಾರವಾಗಿ ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಅವನನ್ನು ಕ್ಷಮಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮತ್ತೊಂದನ್ನು ವಿಧಿಯಾನುಸಾರ ದಹನಬಲಿ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮತ್ತೊಂದನ್ನು ಯಥಾವಿಧಿಯಾಗಿ ಸರ್ವಾಂಗಹೋಮ ಮಾಡಿಬಿಡಬೇಕು. ಅವನ ತಪ್ಪಿನ ನಿವಿುತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನು ಕ್ರಮದ ಪ್ರಕಾರ, ಎರಡನೆಯದನ್ನು ದಹನಬಲಿಯಾಗಿ ಸಮರ್ಪಿಸಬೇಕು. ಯಾಜಕನು ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು. ಅಧ್ಯಾಯವನ್ನು ನೋಡಿ |