ಯಾಜಕಕಾಂಡ 5:15 - ಪರಿಶುದ್ದ ಬೈಬಲ್15 “ಒಬ್ಬನು ಯೆಹೋವನ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮೀರಿ ನಡೆದು ತಿಳಿಯದೆ ತಪ್ಪು ಮಾಡಿದರೆ ಅವನು ಅಂಗದೋಷವಿಲ್ಲದ ಟಗರನ್ನು ತರಬೇಕು. ಇದು ಅವನಿಗಾಗಿ ಯೆಹೋವನಿಗೆ ಸಮರ್ಪಣೆಯಾಗುವ ದೋಷಪರಿಹಾರಕ ಯಜ್ಞ. ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಟಗರಿನ ಬೆಲೆಯನ್ನು ಗೊತ್ತುಮಾಡಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧಪ್ರಾಯಶ್ಚಿತ್ತಕ್ಕಾಗಿ ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ಎರಡು ಅಥವಾ ಹೆಚ್ಚು ರೂಪಾಯಿ ಬಾಳುವದೆಂದು ನಿಮಗೆ ತೋರುವ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಈ ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು.