ಯಾಜಕಕಾಂಡ 5:18 - ಪರಿಶುದ್ದ ಬೈಬಲ್18 ಅವನು ಅಂಗದೋಷವಿಲ್ಲದ ಮತ್ತು ಸರಿಯಾದ ಬೆಲೆಬಾಳುವ ಟಗರನ್ನು ಯಾಜಕನ ಬಳಿಗೆ ತರಬೇಕು. ಟಗರು ದೋಷಪರಿಹಾರಕ ಯಜ್ಞವಾಗಿರುವುದು. ಹೀಗೆ ಯಾಜಕನು ತಿಳಿಯದೆ ಮಾಡಿದ ಪಾಪದಿಂದ ಅವನನ್ನು ಶುದ್ಧಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಂಥವರು ಪರಿಹಾರಕ್ಕಾಗಿ ಹಿಂಡಿನಿಂದ ಕಳಂಕರಹಿತವಾದ ಟಗರೊಂದನ್ನು ಅಥವಾ ಅದಕ್ಕೆ ಸರಿಸಮಾನವಾದುದನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವರು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಬೇಕು. ಆಗ ಅವರಿಗೆ ಕ್ಷಮೆ ದೊರಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ನಿಮಗೆ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅಲ್ಲದೆ ಅವನು ಹಿಂಡಿನೊಳಗಿಂದ ಕಳಂಕರಹಿತವಾದ ಒಂದು ಟಗರನ್ನು ನಿನ್ನ ಅಂದಾಜಿಗನುಸಾರ ಪ್ರಾಯಶ್ಚಿತ್ತ ಬಲಿಗಾಗಿ, ಯಾಜಕನ ಬಳಿಗೆ ತರಬೇಕು. ಯಾಜಕನು, ಅಜ್ಞಾನದಿಂದ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ, ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನಿಗೆ ಕ್ಷಮೆ ದೊರಕುವುದು. ಅಧ್ಯಾಯವನ್ನು ನೋಡಿ |