Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:3 - ಪರಿಶುದ್ದ ಬೈಬಲ್‌

3 “ಒಬ್ಬನು ಮತ್ತೊಬ್ಬನ ದೇಹದೊಳಗಿಂದ ಬರುವ ಯಾವುದಾದರೂ ಅಶುದ್ಧ ವಸ್ತುವನ್ನು ತಿಳಿಯದೆ ಮುಟ್ಟಿದರೂ, ತಿಳಿದುಬಂದಾಗ ಅವನು ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಮನುಷ್ಯ ದೇಹದಿಂದುಂಟಾದ ಯಾವುದಾದರು ಒಂದು ಅಶುದ್ಧ ವಸ್ತು ತಗುಲಿದ್ದು, ಅವನಿಗೆ ತಿಳಿಯದೆ ಹೋದರೂ, ತಿಳಿದು ಬಂದಾಗ ಅವನು ದೋಷಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮನುಷ್ಯದೇಹದಿಂದುಂಟಾದ ಯಾವದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆಹೋದರೂ ತಿಳಿದುಬಂದಾಗ ಅವನು ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಲ್ಲವೆ, ಅವನು ಮನುಷ್ಯನ ಅಶುದ್ಧತ್ವವನ್ನು ತಗಲಿದರೆ, ಮನುಷ್ಯನನ್ನು ಅಶುದ್ಧಪಡಿಸುವ ಯಾವುದೇ ಅಶುದ್ಧತ್ವವಾಗಿದ್ದರೂ ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಅವನು ಅಪರಾಧಿಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:3
10 ತಿಳಿವುಗಳ ಹೋಲಿಕೆ  

“ಯಾವನಾದರೂ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವನ್ನಾಗಲಿ ಅಥವಾ ಬೇರೆ ಯಾವ ಅಶುದ್ಧ ವಸ್ತುವನ್ನಾಗಲಿ ಮುಟ್ಟಿದರೆ ತಾನು ಮುಟ್ಟಿದ್ದು ತಿಳಿಯದಿದ್ದರೂ ಅವನು ಅಶುದ್ಧನೂ ದೋಷಿಯೂ ಆಗಿರುವನು.


“ಒಬ್ಬನು ಆಲೋಚಿಸದೆ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಮಾತುಕೊಟ್ಟು ಮರೆತುಬಿಟ್ಟರೆ, ಅದು ಅವನ ನೆನಪಿಗೆ ಬಂದಾಗ ಅವನು ದೋಷಿಯಾಗುವನು.


“ಒಬ್ಬನಿಗೆ ಮನುಷ್ಯದೇಹದಿಂದ ಆಗಿರುವ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧ ವಸ್ತು ಇವುಗಳಲ್ಲಿ ಯಾವುದಾದರೂ ಸ್ಪರ್ಶವಾಗಿದ್ದರೆ ಅವನು ಅಶುದ್ಧನಾಗಿದ್ದಾನೆ. ಅವನು ಯೆಹೋವನಿಗೆ ಸೇರಿದ ಸಮಾಧಾನಯಜ್ಞಗಳ ಮಾಂಸವನ್ನು ತಿಂದರೆ, ಅವನನ್ನು ಕುಲದಿಂದ ತೆಗೆದುಹಾಕಬೇಕು.”


ಅಶುದ್ಧನಾದವನು ಮುಟ್ಟುವುದೆಲ್ಲಾ ಅಶುದ್ಧವಾಗುತ್ತದೆ. ಅಲ್ಲದೆ ಅವನನ್ನು ಮಟ್ಟುವವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.”


ಅನಂತರ ಅವನು ಪವಿತ್ರಸ್ಥಳಕ್ಕೆ ತಿರುಗಿ ಹೋಗಬಹುದು. ಆದರೆ ಒಳಗಿನ ಪ್ರಾಕಾರದೊಳಗೆ ಹೋಗುವ ದಿನದಂದು ಯಾಜಕನು ಮೊದಲು ತನಗಾಗಿ ಪಾಪಪರಿಹಾರಕಯಜ್ಞವನ್ನು ಸಮರ್ಪಿಸಿಕೊಳ್ಳಬೇಕು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ನೋಡಬೇಕು. ಮಚ್ಚೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಮಚ್ಚೆಯು ಅವನ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಪರೀಕ್ಷಿಸಿದ ನಂತರ ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು