ಯಾಜಕಕಾಂಡ 5:4 - ಪರಿಶುದ್ದ ಬೈಬಲ್4 “ಒಬ್ಬನು ಆಲೋಚಿಸದೆ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಮಾತುಕೊಟ್ಟು ಮರೆತುಬಿಟ್ಟರೆ, ಅದು ಅವನ ನೆನಪಿಗೆ ಬಂದಾಗ ಅವನು ದೋಷಿಯಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಕೇಡಿಗಾಗಲಿ ಯಾವದಾದರೂ ಆಣೆಯಿಟ್ಟುಕೊಂಡರೆ ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು. ಅಧ್ಯಾಯವನ್ನು ನೋಡಿ |
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು