ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಅವರು ಹೋಗುವಾಗ, ನನ್ನ ಸೇವೆಮಾಡಲು ಅವರು ಧರಿಸಿಕೊಂಡಿದ್ದ ವಸ್ತ್ರಗಳನ್ನು ತೆಗೆದಿಡುವರು. ಒಳಗಿನ ಪ್ರಾಕಾರದಲ್ಲಿರುವ ವಿಶೇಷವಾದ ಉಗ್ರಾಣ ಕೋಣೆಯಲ್ಲಿ ಅವರು ಆ ವಸ್ತ್ರಗಳನ್ನು ಇಡುವರು ಮತ್ತು ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಹೋಗುವಾಗ ಬೇರೆ ಬಟ್ಟೆಗಳನ್ನು ಧರಿಸಿಕೊಳ್ಳುವರು. ಹೀಗೆ ಅವರು ಮಾಡುವದರಿಂದ ಸಾಮಾನ್ಯ ಜನರು ಆ ವಿಶೇಷವಾದ ಬಟ್ಟೆಗಳನ್ನು ಮುಟ್ಟಿದಂತಾಗುವುದು.
“ಪಾಪಪರಿಹಾರಕ ಯಜ್ಞಕ್ಕಾಗಿ ಇರುವ ಹೋರಿಯನ್ನು ಮತ್ತು ಹೋತವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಬೇಕು. (ಆ ಪಶುಗಳ ರಕ್ತವನ್ನು, ಪವಿತ್ರವಸ್ತುಗಳನ್ನು ಶುದ್ಧೀಕರಿಸುವುದಕ್ಕೆ ಪವಿತ್ರಸ್ಥಳಕ್ಕೆ ತರಲಾಯಿತು.) ಯಾಜಕರು ಆ ಪಶುಗಳ ಚರ್ಮ, ಮಾಂಸ ಮತ್ತು ದೇಹದ ಕಲ್ಮಶವನ್ನೆಲ್ಲಾ ಬೆಂಕಿಯಿಂದ ಸುಟ್ಟುಹಾಕಿಸಬೇಕು.
ಯಾಜಕನು ಈ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ, ಆ ಮೊದಲನೆಯ ಹೋರಿಯನ್ನು ಸುಟ್ಟುಹಾಕಿದ ಸ್ಥಳದಲ್ಲಿಯೇ ಅದನ್ನು ಸುಡಬೇಕು. ಇದು ಇಡೀ ಸಮೂಹದ ಪಾಪವನ್ನು ಪರಿಹಾರ ಮಾಡುವ ಸಮರ್ಪಣೆಯಾಗಿದೆ.
ಆದರೆ ವೇದಿಕೆಯ ಮೇಲೆ ಬೆಂಕಿ ಉರಿಯುತ್ತಲೇ ಇರಬೇಕು. ಅದನ್ನು ಆರಿ ಹೋಗುವುದಕ್ಕೆ ಬಿಡಬಾರದು, ಯಾಜಕನು ಪ್ರತಿ ಮುಂಜಾನೆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಸಿದ್ಧಪಡಿಸಿ, ಸಮಾಧಾನಯಜ್ಞದ ಕೊಬ್ಬನ್ನು ಸುಡಬೇಕು.
ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಆ ಸಮಯದಲ್ಲಿ ಯಜ್ಞವೇದಿಕೆಯು ಮಹಾಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು.
“ಆರೋನನು ಮಹಾಯಾಜಕನಾಗಿ ಅಭಿಷೇಕಿಸಲ್ಪಡುವ ದಿನದಂದು ಅವನು ಮತ್ತು ಅವನ ಪುತ್ರರು ಯೆಹೋವನ ಸನ್ನಿಧಿಗೆ ತರಬೇಕಾದ ಧಾನ್ಯಸಮರ್ಪಣೆ ಇದಾಗಿದೆ. ಅವರು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯನೈವೇದ್ಯಕ್ಕಾಗಿ ತರಬೇಕು. (ದಿನನಿತ್ಯದ ನೈವೇದ್ಯಗಳ ಸಮಯಗಳಲ್ಲಿ ಇದನ್ನು ಅರ್ಪಿಸಬೇಕು.) ಅವರು ಇದರಲ್ಲಿ ಅರ್ಧದಷ್ಟನ್ನು ಮುಂಜಾನೆಯಲ್ಲಿ ಮತ್ತು ಉಳಿದರ್ಧವನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು.
“ಆರೋನನ ಸ್ಥಾನವನ್ನು ಹೊಂದುವುದಕ್ಕಾಗಿ ಆರೋನನ ಸಂತತಿಯವರಲ್ಲಿ ಆರಿಸಲ್ಪಟ್ಟು ಅಭಿಷೇಕಿಸಲ್ಪಟ್ಟ ಯಾಜಕನು ಯೆಹೋವನಿಗೆ ಈ ಧಾನ್ಯಸಮರ್ಪಣೆ ಮಾಡಬೇಕು. ಈ ನಿಯಮ ಶಾಶ್ವತವಾದದ್ದು. ಧಾನ್ಯಸಮರ್ಪಣೆ ಸಂಪೂರ್ಣವಾಗಿ ಹೋಮವಾಗಬೇಕು.
ಆ ರೊಟ್ಟಿಯು ಆರೋನನಿಗೆ ಮತ್ತು ಅವನ ಪುತ್ರರಿಗೆ ಸಲ್ಲತಕ್ಕದ್ದು. ಅವರು ರೊಟ್ಟಿಯನ್ನು ಪವಿತ್ರಸ್ಥಳದಲ್ಲಿ ತಿನ್ನುವರು. ಯಾಕೆಂದರೆ ಅದು ಮಹಾ ಪವಿತ್ರವಾದದ್ದು. ಅದು ಅಗ್ನಿಯ ಮೂಲಕ ಅರ್ಪಿಸಿದ ಯಜ್ಞಗಳಲ್ಲಿ ಒಂದಾಗಿದೆ. ಆ ರೊಟ್ಟಿಯು ಶಾಶ್ವತವಾಗಿ ಆರೋನನಿಗೆ ಸಲ್ಲತಕ್ಕದ್ದು.”