Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:16 - ಪರಿಶುದ್ದ ಬೈಬಲ್‌

16 “ಆರೋನನ ಮತ್ತು ಅವನ ಪುತ್ರರು ಧಾನ್ಯನೈವೇದ್ಯದಲ್ಲಿ ಉಳಿದದ್ದನ್ನು ತಿನ್ನಬೇಕು. ಅವರು ಆ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದಲ್ಲಿ ಅಂದರೆ ದೇವದರ್ಶನಗುಡಾರದ ಸುತ್ತಲಿರುವ ಅಂಗಳದಲ್ಲಿ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮಿಕ್ಕದ್ದನ್ನು ಆರೋನನೂ ಅವನ ವಂಶಜರೂ ತಿನ್ನಬಹುದು. ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ, ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ವಿುಕ್ಕದ್ದನ್ನು ಆರೋನನೂ ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದರಲ್ಲಿ ಉಳಿದದ್ದನ್ನು ಆರೋನನೂ, ಅವನ ಪುತ್ರರೂ ತಿನ್ನಬೇಕು. ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು. ಅದನ್ನು ಅವರು ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:16
13 ತಿಳಿವುಗಳ ಹೋಲಿಕೆ  

ಜನರು ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞಕ್ಕೆ ತಂದ ಕಾಣಿಕೆಯೇ ಅವರ ಆಹಾರವಾಗಿರುವದು.


ಧಾನ್ಯಸಮರ್ಪಣೆಯಲ್ಲಿ ಉಳಿದ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿವೆ. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ಸಮರ್ಪಣೆಯು ಮಹಾಪರಿಶುದ್ಧವಾಗಿದೆ.


ಪಾಪಪರಿಹಾರಕ ಯಜ್ಞವನ್ನು ಅರ್ಪಿಸುವ ಯಾಜಕನು ಅದನ್ನು ಪವಿತ್ರಸ್ಥಳದಲ್ಲಿ ಅಂದರೆ ದೇವದರ್ಶನಗುಡಾರದ ಸುತ್ತಲಿರುವ ಅಂಗಳದಲ್ಲಿ ತಿನ್ನಬೇಕು.


“ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು.


ಆದ್ದರಿಂದ ನಾವು ಪಸ್ಕದ ಊಟ ಮಾಡೋಣ. ದುಷ್ಟತನ ಮತ್ತು ಕೆಡುಕತನ ಎಂಬ ಹಳೆಯ ಹುಳಿಯಿಂದ ಕೂಡಿರುವ ರೊಟ್ಟಿಯನ್ನು ನಾವು ತಿನ್ನದೆ ಹುಳಿರಹಿತವಾದ ರೊಟ್ಟಿಯನ್ನು ತಿನ್ನೋಣ. ಸರಳತೆ ಮತ್ತು ಸತ್ಯತೆ ಇವುಗಳೇ ಆ ಹುಳಿರಹಿತ ರೊಟ್ಟಿ.


ಹೀಗೆ ಆ ವ್ಯಕ್ತಿಯನ್ನು ಅವನ ದೋಷಗಳಿಂದ ಶುದ್ಧೀಕರಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು. ಧಾನ್ಯನೈವೇದ್ಯದಲ್ಲಿರುವಂತೆಯೇ ಯಜ್ಞದಲ್ಲಿ ಉಳಿದ ಭಾಗವು ಯಾಜಕನಿಗೆ ಸೇರಿದೆ. ಧಾನ್ಯಸಮರ್ಪಣೆಯಲ್ಲಿಯೂ ಉಳಿದ ಭಾಗವು ಯಾಜಕನಿಗೆ ಸೇರಿದೆ.”


ಆಗ ಯೆಹೋವನು ಆರೋನನಿಗೆ ಹೀಗೆ ಹೇಳಿದನು: “ನನಗೆ ಬರಬೇಕಾಗಿರುವ ಕೊಡುಗೆಗಳನ್ನು ಮತ್ತು ಇಸ್ರೇಲರ ಪವಿತ್ರವಾದ ಎಲ್ಲಾ ಕಾಣಿಕೆಗಳನ್ನು ಕಾಯುವ ಜವಾಬ್ದಾರಿಕೆಯನ್ನು ನಾನೇ ನಿನಗೆ ವಹಿಸಿದ್ದೇನೆ. ಅವುಗಳನ್ನು ನಿನಗೂ ನಿನ್ನ ಸಂತತಿಯವರಿಗೂ ಪಾಲಾಗಿ ಕೊಟ್ಟಿದ್ದೇನೆ. ಅವು ಯಾವಾಗಲೂ ನಿಮ್ಮವೇ.


ಯಾಜಕನ ಪ್ರತಿಯೊಂದು ಧಾನ್ಯಸಮರ್ಪಣೆ ಸಂಪೂರ್ಣವಾಗಿ ಹೋಮವಾಗಬೇಕು. ಅದನ್ನು ತಿನ್ನಲೇಬಾರದು.”


ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು