Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:18 - ಪರಿಶುದ್ದ ಬೈಬಲ್‌

18 ಆರೋನನ ವಂಶದವರಾದ ಗಂಡಸರೆಲ್ಲರೂ ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳನ್ನು ತಿನ್ನಬಹುದು. ಇದು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿದೆ. ಈ ಕಾಣಿಕೆಗಳಿಗೆ ತಗಲಿದ್ದೆಲ್ಲಾ ಪವಿತ್ರವಾಗುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆರೋನನ ವಂಶಜರಾದ ಗಂಡಸರೆಲ್ಲರು ಅದನ್ನು ತಿನ್ನಬಹುದು. ಸರ್ವೇಶ್ವರನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ಶಾಶ್ವತ ನಿಯಮವಾಗಿ ಆರೋನನ ಸಂತತಿಗೆ ಸಲ್ಲತಕ್ಕದು. ಆ ದ್ರವ್ಯಗಳಿಗೆ ಸೋಂಕಿದೆಲ್ಲವೂ ಪರಿಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ನಿಮ್ಮಸಂತತಿಯವರಿಗೂ ಸಲ್ಲತಕ್ಕದ್ದೆಂಬದು ಶಾಶ್ವತ ನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆರೋನನ ಮಕ್ಕಳಲ್ಲಿ ಎಲ್ಲಾ ಗಂಡುಮಕ್ಕಳೂ ಅದನ್ನು ತಿನ್ನಬಹುದು. ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವುದು. ಅವುಗಳನ್ನು ಮುಟ್ಟುವ ಪ್ರತಿಯೊಬ್ಬನೂ ಪರಿಶುದ್ಧನಾಗಿರಬೇಕು,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:18
19 ತಿಳಿವುಗಳ ಹೋಲಿಕೆ  

ನೀವು ಮಹಾ ಪವಿತ್ರವಾದ ಸ್ಥಳದಲ್ಲಿ ಅದನ್ನು ಊಟಮಾಡಬೇಕು. ನಿಮ್ಮಲ್ಲಿರುವ ಪುರುಷರೆಲ್ಲರೂ ಅವುಗಳನ್ನು ತಿನ್ನಬಹುದು; ಅವು ಮಹಾ ಪವಿತ್ರವಾದವುಗಳೆಂದು ನೀವು ಪರಿಗಣಿಸಬೇಕು.


“ಯಾಜಕನ ಕುಟುಂಬದಲ್ಲಿರುವ ಯಾವ ಪುರುಷನಾದರೂ ಪಾಪಪರಿಹಾರಕ ಯಜ್ಞದ ಮಾಂಸವನ್ನು ತಿನ್ನಬಹುದು. ಅದು ಬಹಳ ಪವಿತ್ರವಾಗಿದೆ.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


“ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದೆ.


ಪಾಪಪರಿಹಾರಕ ಯಜ್ಞದ ಮಾಂಸವು ತಗಲಿದ ವಸ್ತುವೂ ಪವಿತ್ರವಾಗುತ್ತದೆ; ಮುಟ್ಟುವ ವ್ಯಕ್ತಿಯೂ ಪವಿತ್ರವಾಗುವನು. “ಚಿಮಿಕಿಸಲ್ಪಟ್ಟ ರಕ್ತದಲ್ಲಿ ಸ್ವಲ್ಪ ರಕ್ತವು ಯಾರ ಬಟ್ಟೆಯ ಮೇಲಾದರೂ ಬಿದ್ದರೆ, ನೀವು ಆ ಬಟ್ಟೆಗಳನ್ನು ಪವಿತ್ರಸ್ಥಳದಲ್ಲಿ ತೊಳೆಯಬೇಕು.


ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”


ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಆ ಸಮಯದಲ್ಲಿ ಯಜ್ಞವೇದಿಕೆಯು ಮಹಾಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು.


ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


“ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು.


ಆಗ ಯೆಹೋವನು ಆರೋನನಿಗೆ ಹೀಗೆ ಹೇಳಿದನು: “ನನಗೆ ಬರಬೇಕಾಗಿರುವ ಕೊಡುಗೆಗಳನ್ನು ಮತ್ತು ಇಸ್ರೇಲರ ಪವಿತ್ರವಾದ ಎಲ್ಲಾ ಕಾಣಿಕೆಗಳನ್ನು ಕಾಯುವ ಜವಾಬ್ದಾರಿಕೆಯನ್ನು ನಾನೇ ನಿನಗೆ ವಹಿಸಿದ್ದೇನೆ. ಅವುಗಳನ್ನು ನಿನಗೂ ನಿನ್ನ ಸಂತತಿಯವರಿಗೂ ಪಾಲಾಗಿ ಕೊಟ್ಟಿದ್ದೇನೆ. ಅವು ಯಾವಾಗಲೂ ನಿಮ್ಮವೇ.


“ಅಭಿಷಿಕ್ತನಾದ ಯಾಜಕನು ತಪ್ಪುಮಾಡಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಅರ್ಪಿಸಬೇಕು.


ಅಧಿಪತಿಯು ತನ್ನ ಕೈಯನ್ನು ಹೋತದ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮ ಪಶುಗಳನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪಪರಿಹಾರಕ ಯಜ್ಞವಾಗಿದೆ.


ಅವನು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಅದನ್ನು ಸರ್ವಾಂಗಹೋಮದ ಯಜ್ಞಪಶುಗಳನ್ನು ವಧಿಸುವ ಸ್ಥಳದಲ್ಲಿ ಪಾಪಪರಿಹಾರಕಯಜ್ಞವಾಗಿ ವಧಿಸಬೇಕು.


ಯಾಜಕನು ತನ್ನ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಳ್ಳಬೇಕು. ಯಾಜಕನು ಸರ್ವಾಂಗಹೋಮ ಮಾಡಿದಾಗ ಬೆಂಕಿಯಿಂದ ಉಂಟಾದ ಬೂದಿಯನ್ನು ತೆಗೆದು ವೇದಿಕೆಯ ಬಳಿಯಲ್ಲಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು