Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:2 - ಪರಿಶುದ್ದ ಬೈಬಲ್‌

2 “ಯಾವನಾದರೂ ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ತನ್ನ ಬಳಿಯಲ್ಲಿ ಅಡವು ಇಟ್ಟ ವಸ್ತುವಿನ ವಿಷಯದಲ್ಲಾಗಲಿ ತಾನು ಮಾಡಿದ ಕಳುವಿನ ವಿಷಯದಲ್ಲಾಗಲಿ ಸುಳ್ಳಾಡುವುದರಿಂದಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮಲ್ಲಿ ಯಾರಾದರು ಮತ್ತೊಬ್ಬನಿಂದ ತಮ್ಮ ವಶಕ್ಕೆ ಕೊಡಲಾದ ವಸ್ತುವಿನ ವಿಷಯದಲ್ಲಾಗಲಿ, ತಮ್ಮ ಬಳಿಯಲ್ಲಿ ಇಡಲಾದ ಅಡವಿನ ವಿಷಯದಲ್ಲಾಗಲಿ, ತಾನು ಮಾಡಿದ ಕಳವಿನ ವಿಷಯದಲ್ಲಾಗಲಿ, ಸುಳ್ಳಾಡಿಯೋ, ಮತ್ತೊಬ್ಬನನ್ನು ಮೋಸಗೊಳಿಸಿಯೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾವನಾದರೂ ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿನ ವಿಷಯದಲ್ಲಾಗಲಿ ತಾನು ಮಾಡಿದ ಕಳವಿನ ವಿಷಯದಲ್ಲಾಗಲಿ ಸುಳ್ಳಾಡುವದರಿಂದಲೋ ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದಲೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯಾರಾದರೂ ಪಾಪಮಾಡಿದರೆ ಮತ್ತು ನೆರೆಯವರಿಗೆ ಮೋಸ ಮಾಡುವ ಮೂಲಕ ಯೆಹೋವ ದೇವರಿಗೆ ವಿಶ್ವಾಸದ್ರೋಹಿ ಆಗಿದ್ದರೆ ಅಥವಾ ಅವರ ಆರೈಕೆಯಲ್ಲಿ ಏನಾದರೂ ಉಳಿಸಿಕೊಂಡಿದ್ದರೆ ಅಥವಾ ಯಾವುದನ್ನಾದರೂ ಕದ್ದುಕೊಂಡಿದ್ದರೆ ಅಥವಾ ಅವರು ತಮ್ಮ ನೆರೆಹೊರೆಯವರಿಗೆ ಮೋಸ ಮಾಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:2
25 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ ನೀವು ನಿಮ್ಮ ಹಳೆಯ ಪಾಪಪೂರಿತ ಜೀವನವನ್ನು ಮತ್ತು ನಿಮ್ಮ ಮೊದಲಿನ ಕಾರ್ಯಗಳನ್ನು ಬಿಟ್ಟುಬಿಟ್ಟಿದ್ದೀರಿ.


ನೀನು ಜಮೀನನ್ನು ಮಾರುವುದಕ್ಕಿಂತ ಮೊದಲು ಅದು ನಿನ್ನದೇ ಆಗಿತ್ತು. ನೀನು ಮಾರಿದ ಮೇಲೆಯೂ ಬಂದ ಹಣ ನಿನ್ನದೇ ಆಗಿತ್ತು. ಈ ಕೆಟ್ಟಕಾರ್ಯವನ್ನು ಮಾಡಲು ನೀನು ಯಾಕೆ ಯೋಚಿಸಿಕೊಂಡೆ? ನೀನು ಸುಳ್ಳು ಹೇಳಿದ್ದು ದೇವರಿಗೆ, ಮನುಷ್ಯರಿಗಲ್ಲ!” ಎಂದು ಹೇಳಿದನು.


ಬೇರೊಬ್ಬನ ವಿರೋಧವಾಗಿ ಸಕಾರಣವಿಲ್ಲದೆ ಸಾಕ್ಷಿ ಹೇಳಬೇಡ, ಸುಳ್ಳನ್ನೂ ಹೇಳಬೇಡ.


“ನೀವು ಕದಿಯಬಾರದು; ಮೋಸಮಾಡಬಾರದು; ಒಬ್ಬರಿಗೊಬ್ಬರು ಸುಳ್ಳಾಡಬಾರದು.


“ಒಬ್ಬನು ಯೆಹೋವನ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮೀರಿ ನಡೆದು ತಿಳಿಯದೆ ತಪ್ಪು ಮಾಡಿದರೆ ಅವನು ಅಂಗದೋಷವಿಲ್ಲದ ಟಗರನ್ನು ತರಬೇಕು. ಇದು ಅವನಿಗಾಗಿ ಯೆಹೋವನಿಗೆ ಸಮರ್ಪಣೆಯಾಗುವ ದೋಷಪರಿಹಾರಕ ಯಜ್ಞ. ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಟಗರಿನ ಬೆಲೆಯನ್ನು ಗೊತ್ತುಮಾಡಬೇಕು.”


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.


ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೆಯ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವೆ?


ವರ್ತಕರಾದ ನೀವು ಹೇಳುವುದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟ ಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.


ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ.


ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:


ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, “ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿವೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.”


ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.


ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.


ಅವನು ದೋಷಿಯಾದ್ದರಿಂದ ಯೆಹೋವನಿಗೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಬೇಕು.”


ಇಸಾಕನ ಹೆಂಡತಿಯಾದ ರೆಬೆಕ್ಕಳು ತುಂಬ ಸೌಂದರ್ಯವತಿಯಾಗಿದ್ದಳು. ಆ ಸ್ಥಳದ ಗಂಡಸರು ರೆಬೆಕ್ಕಳ ಬಗ್ಗೆ ಇಸಾಕನನ್ನು ಕೇಳಿದರು. ಇಸಾಕನು ಅವರಿಗೆ, “ಆಕೆ ನನ್ನ ತಂಗಿ” ಎಂದು ಹೇಳಿದನು. ರೆಬೆಕ್ಕಳು ತನಗೆ ಹೆಂಡತಿಯಾಗಬೇಕೆಂದು ಅವರಿಗೆ ತಿಳಿದರೆ ಆಕೆಯನ್ನು ತೆಗೆದುಕೊಳ್ಳಲು ಅವರು ತನ್ನನ್ನು ಕೊಲ್ಲಬಹುದೆಂಬ ಹೆದರಿಕೆಯಿಂದ ಇಸಾಕನು ಹಾಗೆ ಹೇಳಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ಆದರೆ ಉತ್ತರಕ್ಕೆ ಅಭಿಮುಖವಾಗಿರುವ ಕೋಣೆಯು ಯಜ್ಞವೇದಿಯಲ್ಲಿ ಕಾರ್ಯವಹಿಸುತ್ತಿರುವ ಯಾಜಕರಿಗಾಗಿ, ಯಾಜಕರೆಲ್ಲರೂ ಲೇವಿ ಕುಲದವರಾಗಿದ್ದಾರೆ. ಎರಡನೇ ಗುಂಪಿನ ಯಾಜಕರು ಚಾದೋಕನ ಸಂತತಿಯವರಾಗಿದ್ದರು. ಅವರು ಮಾತ್ರವೇ ಯಜ್ಞವೇದಿಯಲ್ಲಿ ಯಜ್ಞಾರ್ಪಣೆ ಮಾಡಬಹುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು