ಯಾಜಕಕಾಂಡ 6:21 - ಪರಿಶುದ್ದ ಬೈಬಲ್21 ಶ್ರೇಷ್ಠವಾದ ಗೋಧಿಹಿಟ್ಟಿಗೆ ಎಣ್ಣೆಯನ್ನು ಬೆರೆಸಿ ಕಬ್ಬಿಣದ ಹಂಚಿನ ಮೇಲೆ ರೊಟ್ಟಿ ಸುಟ್ಟು ಅದನ್ನು ಒಳಗೆ ತರಬೇಕು. ನೀವು ಈ ಸಮರ್ಪಣೆಯನ್ನು ತುಂಡುತುಂಡಾಗಿ ಮುರಿದು ಸಮರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಕಬ್ಬಿಣದ ಹೆಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಸರ್ವೇಶ್ವರನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗ ಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಬೇಯಿಸಿದ ಧಾನ್ಯ ಸಮರ್ಪಣೆಯ ತುಂಡುಗಳನ್ನು ನೀನು ಯೆಹೋವ ದೇವರಿಗೆ ಸುವಾಸನೆಯಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |