ಯಾಜಕಕಾಂಡ 6:22 - ಪರಿಶುದ್ದ ಬೈಬಲ್22 “ಆರೋನನ ಸ್ಥಾನವನ್ನು ಹೊಂದುವುದಕ್ಕಾಗಿ ಆರೋನನ ಸಂತತಿಯವರಲ್ಲಿ ಆರಿಸಲ್ಪಟ್ಟು ಅಭಿಷೇಕಿಸಲ್ಪಟ್ಟ ಯಾಜಕನು ಯೆಹೋವನಿಗೆ ಈ ಧಾನ್ಯಸಮರ್ಪಣೆ ಮಾಡಬೇಕು. ಈ ನಿಯಮ ಶಾಶ್ವತವಾದದ್ದು. ಧಾನ್ಯಸಮರ್ಪಣೆ ಸಂಪೂರ್ಣವಾಗಿ ಹೋಮವಾಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತ ಯಾಜಕಪಟ್ಟಕ್ಕೆ ಬರುತ್ತಾನೋ ಅವನೇ ಅದನ್ನು ಸಮರ್ಪಿಸಬೇಕು. ಇದು ಶಾಶ್ವತ ನಿಯಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ನಿಶ್ಶೇಷವಾಗಿ ಹೋಮಮಾಡಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು. ಅಧ್ಯಾಯವನ್ನು ನೋಡಿ |