ಯಾಜಕಕಾಂಡ 6:26 - ಪರಿಶುದ್ದ ಬೈಬಲ್26 ಪಾಪಪರಿಹಾರಕ ಯಜ್ಞವನ್ನು ಅರ್ಪಿಸುವ ಯಾಜಕನು ಅದನ್ನು ಪವಿತ್ರಸ್ಥಳದಲ್ಲಿ ಅಂದರೆ ದೇವದರ್ಶನಗುಡಾರದ ಸುತ್ತಲಿರುವ ಅಂಗಳದಲ್ಲಿ ತಿನ್ನಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅದು ಮಹಾಪರಿಶುದ್ಧವಾದ್ದರಿಂದ ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಅದನ್ನು ಪವಿತ್ರ ಸ್ಥಳದೊಳಗೆ, ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದು ಮಹಾಪರಿಶುದ್ಧವಾದದ್ದರಿಂದ ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಪಾಪ ಪರಿಹಾರದ ಬಲಿಯನ್ನು ಮಾಡುವ ಯಾಜಕನು ಅದನ್ನು ತಿನ್ನಬೇಕು. ಅದನ್ನು ಸಭೆಯ ದೇವದರ್ಶನದ ಗುಡಾರದ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು. ಅಧ್ಯಾಯವನ್ನು ನೋಡಿ |
ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕಯಜ್ಞದ ಮಾಂಸಗಳನ್ನು ಬೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.”
ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.