ಯಾಜಕಕಾಂಡ 6:27 - ಪರಿಶುದ್ದ ಬೈಬಲ್27 ಪಾಪಪರಿಹಾರಕ ಯಜ್ಞದ ಮಾಂಸವು ತಗಲಿದ ವಸ್ತುವೂ ಪವಿತ್ರವಾಗುತ್ತದೆ; ಮುಟ್ಟುವ ವ್ಯಕ್ತಿಯೂ ಪವಿತ್ರವಾಗುವನು. “ಚಿಮಿಕಿಸಲ್ಪಟ್ಟ ರಕ್ತದಲ್ಲಿ ಸ್ವಲ್ಪ ರಕ್ತವು ಯಾರ ಬಟ್ಟೆಯ ಮೇಲಾದರೂ ಬಿದ್ದರೆ, ನೀವು ಆ ಬಟ್ಟೆಗಳನ್ನು ಪವಿತ್ರಸ್ಥಳದಲ್ಲಿ ತೊಳೆಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ಪ್ರಾಣಿಯ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು, ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರ ಸ್ಥಳದಲ್ಲೇ ಒಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲಾ ಪರಿಶುದ್ಧವಾಗುವದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅದರ ಮಾಂಸವನ್ನು ಮುಟ್ಟಿದ್ದೆಲ್ಲವೂ ಪರಿಶುದ್ಧವಾಗಿರುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಉಡುಪಿನ ಮೇಲೆ ಬಿದ್ದರೆ, ಅದನ್ನು ಚಿಮುಕಿಸಿದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು. ಅಧ್ಯಾಯವನ್ನು ನೋಡಿ |
ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.
ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಅವರು ಹೋಗುವಾಗ, ನನ್ನ ಸೇವೆಮಾಡಲು ಅವರು ಧರಿಸಿಕೊಂಡಿದ್ದ ವಸ್ತ್ರಗಳನ್ನು ತೆಗೆದಿಡುವರು. ಒಳಗಿನ ಪ್ರಾಕಾರದಲ್ಲಿರುವ ವಿಶೇಷವಾದ ಉಗ್ರಾಣ ಕೋಣೆಯಲ್ಲಿ ಅವರು ಆ ವಸ್ತ್ರಗಳನ್ನು ಇಡುವರು ಮತ್ತು ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಹೋಗುವಾಗ ಬೇರೆ ಬಟ್ಟೆಗಳನ್ನು ಧರಿಸಿಕೊಳ್ಳುವರು. ಹೀಗೆ ಅವರು ಮಾಡುವದರಿಂದ ಸಾಮಾನ್ಯ ಜನರು ಆ ವಿಶೇಷವಾದ ಬಟ್ಟೆಗಳನ್ನು ಮುಟ್ಟಿದಂತಾಗುವುದು.