Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:3 - ಪರಿಶುದ್ದ ಬೈಬಲ್‌

3 ಮತ್ತೊಬ್ಬನು ಕಳೆದುಕೊಂಡದ್ದನ್ನು ಕಂಡುಕೊಂಡು ಅದರ ಬಗ್ಗೆ ಸುಳ್ಳು ಹೇಳುವುದರಿಂದಾಗಲಿ ಮಾಡಿದ ಪ್ರಮಾಣವನ್ನು ಉಲ್ಲಂಘಿಸುವುದರಿಂದಾಗಲಿ ಪಾಪಮಾಡಿ ಯೆಹೋವನಿಗೆ ದ್ರೋಹಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮತ್ತೊಬ್ಬನು ಕಳೆದುಕೊಂಡದ್ದನ್ನು ತಾವು ಕಂಡು ಬೊಂಕಿಯೋ, ಸುಳ್ಳಾಣೆಯಿಟ್ಟೋ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಇಟ್ಟುಕೊಂಡರೆ, ಇಂಥ ವಿಷಯಗಳಲ್ಲಿ ಪಾಪಮಾಡಿ, ಸರ್ವೇಶ್ವರನಿಗೆ ದ್ರೋಹಿಗಳಾಗಿ ದೋಷಕ್ಕೆ ಒಳಗಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮತ್ತೊಬ್ಬನು ಕಳಕೊಂಡದ್ದನ್ನು ತಾನು ಕಂಡು ಬೊಂಕಿ ಸುಳ್ಳಾಣೆಯಿಟ್ಟದ್ದರಿಂದಲೋ ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಲ್ಲವೆ ಕಳೆದುಹೋಗಿದ ವಸ್ತು ಸಿಕ್ಕಿ, ಅದರ ವಿಷಯದಲ್ಲಿ ಸುಳ್ಳಾಡಿದ್ದರೆ ಮತ್ತು ಸುಳ್ಳಾಗಿ ಪ್ರಮಾಣ ಮಾಡಿದ್ದರೆ, ಇವೆಲ್ಲವುಗಳಲ್ಲಿ ಯಾವುದನ್ನಾದರೂ ಒಬ್ಬನು ಮಾಡಿದ್ದರೆ, ಅವನು ಪಾಪಮಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:3
14 ತಿಳಿವುಗಳ ಹೋಲಿಕೆ  

ನೀವು ನನ್ನ ಹೆಸರನ್ನು ಉಪಯೋಗಿಸಿ ಸುಳ್ಳಾಣೆ ಇಟ್ಟುಕೊಳ್ಳಬಾರದು; ಇಲ್ಲವಾದರೆ ನೀವು ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸುವಿರಿ; ನಾನೇ ನಿಮ್ಮ ದೇವರಾದ ಯೆಹೋವನು!


“ನೀವು ಕಳೆದುಹೋದ ಎತ್ತನ್ನಾಗಲಿ ಕತ್ತೆಯನ್ನಾಗಲಿ ನೋಡಿದರೆ, ಆಗ ನೀವು ಅದನ್ನು ಅದರ ಮಾಲೀಕನಿಗೆ ಹಿಂತಿರುಗಿಸಬೇಕು. ಒಂದುವೇಳೆ ಆ ಮಾಲೀಕನು ನಿಮ್ಮ ವೈರಿಯಾಗಿದ್ದರೂ ನೀವು ಈ ಕಾರ್ಯವನ್ನು ಮಾಡಬೇಕು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.’”


ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ?


ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.”


ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.


ಬೇರೊಬ್ಬನ ವಿರೋಧವಾಗಿ ಸಕಾರಣವಿಲ್ಲದೆ ಸಾಕ್ಷಿ ಹೇಳಬೇಡ, ಸುಳ್ಳನ್ನೂ ಹೇಳಬೇಡ.


“ಯಾಜಕರಿಗೆ ಒಳಗಿನ ಉಡುಪುಗಳನ್ನು ಮಾಡಲು ನಾರುಬಟ್ಟೆಯನ್ನು ಉಪಯೋಗಿಸು. ಈ ಒಳಗಿನ ಉಡುಪುಗಳು ಅವರನ್ನು ಸೊಂಟದಿಂದ ತೊಡೆಯವರೆಗೆ ಮುಚ್ಚುವುದು.


ಯಾಜಕನು ಪಕ್ಷಿಯ ಕರುಳುಗಳನ್ನು ಮತ್ತು ಗರಿಗಳನ್ನು ತೆಗೆದು ಅವುಗಳನ್ನು ವೇದಿಕೆಯ ಪೂರ್ವದಿಕ್ಕಿನಲ್ಲಿ ಬಿಸಾಡಬೇಕು. ಈ ಸ್ಥಳವು ವೇದಿಕೆಯಿಂದ ತೆಗೆದ ಬೂದಿಯನ್ನು ಹಾಕುವ ಸ್ಥಳವಾಗಿದೆ.


ಆರೋನನು ತನ್ನ ಪೂರ್ಣಶರೀರವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಈ ಬಟ್ಟೆಗಳನ್ನು ಹಾಕಿಕೊಳ್ಳಬೇಕು. ಆರೋನನು ಪವಿತ್ರ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಂಡಿರಬೇಕು. ಅವನು ನಾರಿನ ನಡುಕಟ್ಟನ್ನು ಕಟ್ಟಿಕೊಳ್ಳಬೇಕು; ನಾರಿನ ಮುಂಡಾಸವನ್ನು ಇಟ್ಟುಕೊಳ್ಳಬೇಕು. ಇವುಗಳು ಪವಿತ್ರವಾದವುಗಳಾಗಿವೆ.


ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಅವರು ಹೋಗುವಾಗ, ನನ್ನ ಸೇವೆಮಾಡಲು ಅವರು ಧರಿಸಿಕೊಂಡಿದ್ದ ವಸ್ತ್ರಗಳನ್ನು ತೆಗೆದಿಡುವರು. ಒಳಗಿನ ಪ್ರಾಕಾರದಲ್ಲಿರುವ ವಿಶೇಷವಾದ ಉಗ್ರಾಣ ಕೋಣೆಯಲ್ಲಿ ಅವರು ಆ ವಸ್ತ್ರಗಳನ್ನು ಇಡುವರು ಮತ್ತು ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಹೋಗುವಾಗ ಬೇರೆ ಬಟ್ಟೆಗಳನ್ನು ಧರಿಸಿಕೊಳ್ಳುವರು. ಹೀಗೆ ಅವರು ಮಾಡುವದರಿಂದ ಸಾಮಾನ್ಯ ಜನರು ಆ ವಿಶೇಷವಾದ ಬಟ್ಟೆಗಳನ್ನು ಮುಟ್ಟಿದಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು