Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:6 - ಪರಿಶುದ್ದ ಬೈಬಲ್‌

6 ಆ ವ್ಯಕ್ತಿ ದೋಷಪರಿಹಾರಕ ಯಜ್ಞವನ್ನು ಯಾಜಕನ ಬಳಿಗೆ ತರಬೇಕು. ಅದು ಮಂದೆಯಿಂದ ತಂದ ಟಗರಾಗಿರಬೇಕು. ಟಗರಿನಲ್ಲಿ ಯಾವ ದೋಷವೂ ಇರಬಾರದು. ಅದು ಯಾಜಕನು ಹೇಳುವ ಬೆಲೆಯುಳ್ಳದ್ದಾಗಿರಬೇಕು. ಅದು ಯೆಹೋವನಿಗೆ ಸಮರ್ಪಿಸುವ ದೋಷಪರಿಹಾರಕ ಯಜ್ಞವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ಪರಿಹಾರಕ್ಕಾಗಿ, ತಮ್ಮ ಹಿಂಡಿನಿಂದ ಕಳಂಕರಹಿತವಾದ ಒಂದು ಟಗರನ್ನು ಅಥವಾ ಅದಕ್ಕೆ ಸರಿಸಮಾನವಾದುದ್ದನ್ನು ತಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತು ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಕಳಂಕರಹಿತವಾದ ಒಂದು ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವ ದೇವರಿಗೆಂದು ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:6
8 ತಿಳಿವುಗಳ ಹೋಲಿಕೆ  

“ಒಬ್ಬನು ಯೆಹೋವನ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮೀರಿ ನಡೆದು ತಿಳಿಯದೆ ತಪ್ಪು ಮಾಡಿದರೆ ಅವನು ಅಂಗದೋಷವಿಲ್ಲದ ಟಗರನ್ನು ತರಬೇಕು. ಇದು ಅವನಿಗಾಗಿ ಯೆಹೋವನಿಗೆ ಸಮರ್ಪಣೆಯಾಗುವ ದೋಷಪರಿಹಾರಕ ಯಜ್ಞ. ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಟಗರಿನ ಬೆಲೆಯನ್ನು ಗೊತ್ತುಮಾಡಬೇಕು.”


ಅವನು ಅಂಗದೋಷವಿಲ್ಲದ ಮತ್ತು ಸರಿಯಾದ ಬೆಲೆಬಾಳುವ ಟಗರನ್ನು ಯಾಜಕನ ಬಳಿಗೆ ತರಬೇಕು. ಟಗರು ದೋಷಪರಿಹಾರಕ ಯಜ್ಞವಾಗಿರುವುದು. ಹೀಗೆ ಯಾಜಕನು ತಿಳಿಯದೆ ಮಾಡಿದ ಪಾಪದಿಂದ ಅವನನ್ನು ಶುದ್ಧಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.


“ಅವನು ಕುರಿಮರಿಯನ್ನು ಕೊಡುವುದಕ್ಕೆ ಶಕ್ತನಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಅವುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವನ್ನಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಸಮರ್ಪಿಸಬೇಕು.


ಯಾಜಕನು ಟಗರುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅವನು ಆ ಟಗರನ್ನೂ ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯ ಸಮರ್ಪಣೆಯಾಗಿ ನಿವಾಳಿಸುವನು.


ಇವರೆಲ್ಲಾ ತಮ್ಮ ಹೆಂಡತಿಯರನ್ನು ಬಿಟ್ಟುಬಿಡಬೇಕೆಂದು ತೀರ್ಮಾನಿಸಿದರು. ಇವರಲ್ಲಿ ಪ್ರತಿಯೊಬ್ಬರು ದೋಷಪರಿಹಾರಕ್ಕಾಗಿ ಹಿಂಡಿನ ಟಗರನ್ನು ಯಜ್ಞ ಮಾಡಿದರು.


“ನಮ್ಮ ಬೆಳೆಗಳಲ್ಲಿ ಮತ್ತು ಹಣ್ಣಿನ ಮರಗಳಲ್ಲಿ ಬೆಳೆದ ಪ್ರಥಮ ಫಲಗಳನ್ನೆಲ್ಲಾ ಪ್ರತಿವರ್ಷ ದೇವಾಲಯಕ್ಕೆ ತಂದು ಅರ್ಪಿಸುವುದಕ್ಕೆ ಒಪ್ಪಿಕೊಂಡೆವು.


ಆದರೆ ಉತ್ತರಕ್ಕೆ ಅಭಿಮುಖವಾಗಿರುವ ಕೋಣೆಯು ಯಜ್ಞವೇದಿಯಲ್ಲಿ ಕಾರ್ಯವಹಿಸುತ್ತಿರುವ ಯಾಜಕರಿಗಾಗಿ, ಯಾಜಕರೆಲ್ಲರೂ ಲೇವಿ ಕುಲದವರಾಗಿದ್ದಾರೆ. ಎರಡನೇ ಗುಂಪಿನ ಯಾಜಕರು ಚಾದೋಕನ ಸಂತತಿಯವರಾಗಿದ್ದರು. ಅವರು ಮಾತ್ರವೇ ಯಜ್ಞವೇದಿಯಲ್ಲಿ ಯಜ್ಞಾರ್ಪಣೆ ಮಾಡಬಹುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು