Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:10 - ಪರಿಶುದ್ದ ಬೈಬಲ್‌

10 ಧಾನ್ಯಸಮರ್ಪಣೆಗಳು ಆರೋನನ ಪುತ್ರರಿಗೆ ಸೇರುವವು. ಅದು ಒಣಗಿದ್ದರೂ ಎಣ್ಣೆಯಿಂದ ಬೆರೆತಿದ್ದರೂ ಅವರಿಗೆ ಸೇರುವವು. ಯಾಜಕರಾದ ಆರೋನನ ಪುತ್ರರೆಲ್ಲರೂ ಈ ಆಹಾರವನ್ನು ಸಮವಾಗಿ ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ ಅಥವಾ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ, ಬರಿ ಹಿಟ್ಟನ್ನಾಗಲಿ ಯಾರಾದರು ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರು ಸಮವಾಗಿ ಅನುಭವಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಎಣ್ಣೆ ಹೊಯಿದ ಹಿಟ್ಟನ್ನಾಗಲಿ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮವಾಗಿ ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಎಣ್ಣೆಯಿಂದ ಮಿಶ್ರಿತವಾದ ಮತ್ತು ಒಣಗಿದ್ದ ಪ್ರತಿಯೊಂದು ಧಾನ್ಯ ಸಮರ್ಪಣೆಯನ್ನೂ ಆರೋನನ ಪುತ್ರರು ಸರಿ ಸಮಾನವಾಗಿ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:10
4 ತಿಳಿವುಗಳ ಹೋಲಿಕೆ  

ಈಗ ನಿಮ್ಮಲ್ಲಿ ಬೇಕಾದಷ್ಟಿದೆ. ನಿಮ್ಮ ಈ ಸಮೃದ್ಧಿಯು ಇತರ ಜನರ ಕೊರತೆಯನ್ನು ನೀಗಿಸುವುದು. ಬಳಿಕ, ಅವರು ಸಮೃದ್ಧರಾಗಿರುವಾಗ ನಿಮ್ಮ ಕೊರತೆಯನ್ನು ನೀಗಿಸುವರು. ಹೀಗೆ ಎಲ್ಲರೂ ಸಮಾನರಾಗಿರುವರು.


ಅವರು ತಮ್ಮ ಕುಟುಂಬದಲ್ಲಿದ್ದ ಪ್ರತಿಯೊಬ್ಬರ ಆಹಾರವನ್ನು ಒಟ್ಟಾಗಿ ಸೇರಿಸಿ ಅಳತೆಮಾಡಿದಾಗ ಅಲ್ಲಿ ಯಾವಾಗಲೂ ಪ್ರತಿಯೊಬ್ಬನಿಗೆ ಬೇಕಾದಷ್ಟು ಮಾತ್ರ ಆಹಾರವಿರುತ್ತಿತ್ತು. ಅದು ಹೆಚ್ಚಾಗಿಯೂ ಇರುತ್ತಿರಲಿಲ್ಲ; ಕಡಿಮೆಯಾಗಿಯೂ ಇರುತ್ತಿರಲಿಲ್ಲ. ಹೀಗೆ ಪ್ರತಿಯೊಬ್ಬನು ತನಗೆ ಮತ್ತು ತನ್ನ ಕುಟುಂಬಕ್ಕೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಂಡನು.


ಪ್ರತಿ ಧಾನ್ಯಸಮರ್ಪಣೆಯು ಅದನ್ನು ಅರ್ಪಿಸುವ ಯಾಜಕನಿಗೆ ಸೇರುತ್ತದೆ. ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ಧಾನ್ಯಸಮರ್ಪಣೆಗಳನ್ನು ಯಾಜಕನು ಪಡೆಯುವನು.


“ಸಮಾಧಾನಯಜ್ಞದ ಕಟ್ಟಳೆಗಳು ಇಂತಿವೆ: ಯಾರಾದರೂ ಯೆಹೋವನಿಗೆ ಕೃತಜ್ಞತೆಯಿಂದ ಸಮಾಧಾನಯಜ್ಞಗಳನ್ನು ಅರ್ಪಿಸಬೇಕೆಂದಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು