Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:11 - ಪರಿಶುದ್ದ ಬೈಬಲ್‌

11 “ಸಮಾಧಾನಯಜ್ಞದ ಕಟ್ಟಳೆಗಳು ಇಂತಿವೆ: ಯಾರಾದರೂ ಯೆಹೋವನಿಗೆ ಕೃತಜ್ಞತೆಯಿಂದ ಸಮಾಧಾನಯಜ್ಞಗಳನ್ನು ಅರ್ಪಿಸಬೇಕೆಂದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಶಾಂತಿ ಸಮಾಧಾನದ ಬಲಿ ನಿಯಮಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11-12 ಸಮಾಧಾನಯಜ್ಞನಿಯಮಗಳು. ಯಾರಾದರೂ ಕೃತಜ್ಞತೆಯನ್ನು ತೋರಿಸುವದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವದಾದರೆ ಅದರೊಡನೆ ಎಣ್ಣೆ ವಿುಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳನ್ನೂ ಎಣ್ಣೆಯಿಂದ ಪೂರಾ ನೆನಸಿದ ಗೋದಿಹಿಟ್ಟಿನ ಹೋಳಿಗೆಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ ‘ಅವನು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಸಮಾಧಾನದ ಬಲಿಗಳ ನಿಯಮವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:11
12 ತಿಳಿವುಗಳ ಹೋಲಿಕೆ  

ಇಸ್ರೇಲಿನ ನೀರಾವರಿಯ ಹುಲ್ಲುಗಾವಲಿನ ಇನ್ನೂರು ಕುರಿಗಳಲ್ಲಿ ಒಂದು ಕುರಿಯನ್ನು ಕೊಡಬೇಕು. “ಧಾನ್ಯನೈವೇದ್ಯಗಳಿಗೂ, ಸರ್ವಾಂಗಹೋಮಗಳಿಗೂ ಸಮಾಧಾನಯಜ್ಞಗಳಿಗೂ ಈ ಕಾಣಿಕೆಗಳನ್ನು ಕೊಡಬೇಕು. ಈ ಕಾಣಿಕೆಗಳು ಜನರನ್ನು ಶುದ್ಧಮಾಡುವವು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


ಧಾನ್ಯಸಮರ್ಪಣೆಗಳು ಆರೋನನ ಪುತ್ರರಿಗೆ ಸೇರುವವು. ಅದು ಒಣಗಿದ್ದರೂ ಎಣ್ಣೆಯಿಂದ ಬೆರೆತಿದ್ದರೂ ಅವರಿಗೆ ಸೇರುವವು. ಯಾಜಕರಾದ ಆರೋನನ ಪುತ್ರರೆಲ್ಲರೂ ಈ ಆಹಾರವನ್ನು ಸಮವಾಗಿ ಹಂಚಿಕೊಳ್ಳುವರು.


ಯೆಹೋವನ ಯಜ್ಞವೇದಿಕೆಯನ್ನು ಕಟ್ಟಿಸಿ ಅದರಲ್ಲಿ ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದನು. ಯೆಹೂದದಲ್ಲಿದ್ದ ಎಲ್ಲಾ ಜನರೂ ದೇವರಾದ ಯೆಹೋವನ ಸೇವೆಮಾಡುವಂತೆ ಆಜ್ಞೆ ವಿಧಿಸಿದನು.


“ಈ ದಿನ ನಾನು ಸಮಾಧಾನಯಜ್ಞವನ್ನು ಅರ್ಪಿಸಬೇಕಿತ್ತು. ನನ್ನ ಹರಕೆಯನ್ನು ಸಲ್ಲಿಸಿದೆನು. ಯಜ್ಞದಲ್ಲಿ ಉಳಿದ ಮಾಂಸ ನನ್ನಲ್ಲಿ ಬಹಳಷ್ಟಿದೆ.


ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ.


“ಇಸ್ರೇಲರಿಗೆ ಹೇಳು. ಒಬ್ಬನು ಯೆಹೋವನಿಗೆ ಸಮಾಧಾನಯಜ್ಞಕ್ಕಾಗಿ ಪಶುವನ್ನು ತಂದರೆ, ಯೆಹೋವನಿಗೆ ಸಲ್ಲತಕ್ಕ ಭಾಗವನ್ನು ಆತನಿಗೆ ಕೊಡಬೇಕು.


ನೀವು ಅರ್ಪಿಸಿದ ದಿನದಲ್ಲಿ ಅಥವಾ ಮರುದಿನದಲ್ಲಿ ಅದನ್ನು ತಿನ್ನಬಹುದು. ಆದರೆ ಆ ಯಜ್ಞದಲ್ಲಿ ಏನಾದರೂ ಮೂರನೆಯ ದಿನದವರೆಗೆ ಉಳಿದರೆ, ನೀವು ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


“ಯೆಹೋವನಿಗೆ ವಿಶೇಷ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸಲು ಬಯಸಿದರೆ, ಆ ಕಾಣಿಕೆಯನ್ನು ಯೆಹೋವನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಅರ್ಪಿಸಬೇಕು.


ಹಿಜ್ಕೀಯನು ಜನರಿಗೆ, “ಯೆಹೂದದ ಜನರೇ, ನೀವೀಗ ನಿಮ್ಮನ್ನು ಯೆಹೋವನಿಗೆ ಒಪ್ಪಿಸಿದ್ದೀರಿ. ನೀವೀಗ ಬಂದು ದೇವಾಲಯದಲ್ಲಿ ನಿಮ್ಮನಿಮ್ಮ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎಂದು ಹೇಳಲು ಜನರು ತಮ್ಮ ಯಜ್ಞಗಳನ್ನು ಸಮರ್ಪಿಸಲು ಮುಂದೆ ಬಂದರು. ಸರ್ವಾಂಗಹೋಮ ಅರ್ಪಿಸಬೇಕೆಂದಿದ್ದವರು ಸರ್ವಾಂಗಹೋಮಗಳನ್ನು ಅರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು