ಯಾಜಕಕಾಂಡ 7:12 - ಪರಿಶುದ್ದ ಬೈಬಲ್12 ಅವನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆ ಹೊಯಿದು ಮಾಡಿದ ಕಡುಬುಗಳನ್ನೂ ಎಣ್ಣೆಬೆರೆಸಿದ ಹೋಳಿಗೆಗಳನ್ನೂ ತರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯಾರಾದರು ಕೃತಜ್ಞತೆಯನ್ನು ಸಲ್ಲಿಸುವುದಕ್ಕಾಗಿ ಶಾಂತಿಸಮಾಧಾನದ ಬಲಿಯನ್ನು ಸರ್ವೇಶ್ವರನಿಗೆ ಅರ್ಪಿಸಲಾಶಿಸಿದರೆ ಆ ಬಲಿಪ್ರಾಣಿಯ ಸಮೇತ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಹಾಗು ಎಣ್ಣೆಯಿಂದ ಪೂರ್ತಿಯಾಗಿ ತೋಯಿಸಿದ ಗೋದಿಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ ‘ಅವನು ಉಪಕಾರ ಸ್ತುತಿಗಾಗಿ ಅರ್ಪಿಸುವುದಾದರೆ, ಕೃತಜ್ಞತಾಸ್ತುತಿ ಬಲಿಯನ್ನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಗಳೊಂದಿಗೆ, ಎಣ್ಣೆ ಹೊಯ್ದ ಹುಳಿಯಿಲ್ಲದ ದೋಸೆಗಳೊಂದಿಗೆ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದ ರೊಟ್ಟಿಗಳೊಂದಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.