Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:16 - ಪರಿಶುದ್ದ ಬೈಬಲ್‌

16 “ಯಾವನಾದರೂ ಸ್ವಇಚ್ಛೆಯ ಕಾಣಿಕೆಗಾಗಲಿ ಹರಕೆಯನ್ನು ಸಲ್ಲಿಸುವುದಕ್ಕಾಗಲಿ ಸಮಾಧಾನಯಜ್ಞ ಅರ್ಪಿಸಬಹುದು ಅಥವಾ ಆ ವ್ಯಕ್ತಿ ದೇವರಿಗೆ ಕಾಣಿಕೆಯನ್ನು ಅರ್ಪಿಸಿದರೆ, ಅವನು ಅದರ ಯಜ್ಞಮಾಂಸವನ್ನು ಸಮರ್ಪಿಸಿದ ದಿನದಲ್ಲಿಯೇ ತಿನ್ನಬೇಕು. ಉಳಿದದ್ದನ್ನು ಮರುದಿನ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಯಾರಾದರು ಹರಕೆಯನ್ನು ಸಲ್ಲಿಸುವುದಕ್ಕಾಗಿ ಅಥವಾ ಸ್ವೇಚ್ಛೆಯಿಂದ ಅಂಥ ಬಲಿಯನ್ನು ಒಪ್ಪಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಪೂರ್ತಿಯಾಗಿ ಊಟ ಮಾಡಬೇಕಾಗಿಲ್ಲ; ಮಿಕ್ಕದ್ದನ್ನು ಮರುದಿನ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾರಾದರೂ ಹರಕೆಯನ್ನು ಸಲ್ಲಿಸುವದಕ್ಕಾಗಲಿ ಸ್ವೇಚ್ಫೆಯಿಂದಾಗಲಿ ಅಂಥ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ವಿುಕ್ಕದ್ದನ್ನು ಮರುದಿನದಲ್ಲಿ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಯಿಚ್ಛೆಯಾದ ಸಮರ್ಪಣೆಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ಅದನ್ನು ತಿನ್ನಬೇಕು. ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:16
17 ತಿಳಿವುಗಳ ಹೋಲಿಕೆ  

ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.


ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.


“ರಾಜನು ತನ್ನ ಇಚ್ಛೆಯ ಪ್ರಕಾರ ಯೆಹೋವನಿಗೆ ಸರ್ವಾಂಗಹೋಮ ಅಥವಾ ಸಮಾಧಾನಯಜ್ಞ ಅಥವಾ ಮನಃಪೂರ್ವಕವಾದ ಕಾಣಿಕೆಯನ್ನು ಸಮರ್ಪಿಸುವಾಗ ಅವನಿಗಾಗಿ ಪೂರ್ವದ ಬಾಗಿಲು ತೆಗೆಯಲ್ಪಡಬೇಕು. ಆದರೆ ಅವನು ಸಬ್ಬತ್ ದಿನದಂತೆ ತನ್ನ ಕಾಣಿಕೆಗಳನ್ನು ಸಮರ್ಪಿಸಿದ ನಂತರ ಅವನು ಹಿಂತಿರುಗಿದಾಗ ಪ್ರವೇಶ ದ್ವಾರವು ಮುಚ್ಚಲ್ಪಡಬೇಕು.


ನನ್ನ ಹರಕೆಗಳನ್ನು ಯೆಹೋವನಿಗೆ ಜನರ ಮುಂದೆ ಸಲ್ಲಿಸುವೆನು.


ನಾನು ಯೆಹೋವನಿಗೆ ಮಾಡಿದ ಹರಕೆಗಳನ್ನು ಜನರ ಮುಂದೆ ಆತನಿಗೆ ಸಲ್ಲಿಸುವೆನು.


ಆದ್ದರಿಂದ ನಾನು ನಿನ್ನ ಆಲಯಕ್ಕೆ ಬಂದು ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.


“ನೀವು ನಿಮ್ಮ ದೇವರಿಗೆ ವಿಶೇಷ ಕಾಣಿಕೆಗಳನ್ನು ಸಮರ್ಪಿಸಲು ಇಷ್ಟಪಟ್ಟರೆ ಆಗ ನೀವು ದೇವರು ಆರಿಸಿರುವ ಸ್ಥಳಕ್ಕೆ ಹೋಗಿ ಅಲ್ಲಿ ಅದನ್ನು ಸಮರ್ಪಿಸಿರಿ. ನಿಮ್ಮ ಸರ್ವಾಂಗಹೋಮವನ್ನೂ ಆ ಸ್ಥಳದಲ್ಲಿಯೇ ಸಮರ್ಪಿಸಬೇಕು.


“ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನಕೂಡದು. ಅವು ಯಾವುವೆಂದರೆ: ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ನಿಮ್ಮ ಮಂದೆಯಿಂದಾಗಲಿ ಹಿಂಡಿನಿಂದಾಗಲಿ ಅಗ್ನಿಯ ಮೂಲಕ ಯಜ್ಞವನ್ನರ್ಪಿಸುವವನು ಸರ್ವಾಂಗಹೋಮ ಮಾಡಿದರೂ ಅಥವಾ ಸಮಾಧಾನಯಜ್ಞಮಾಡಿದರೂ ಹರಕೆಯ ಯಜ್ಞಮಾಡಿದರೂ ಅಥವಾ ಸ್ವಇಚ್ಛೆಯಿಂದ ಯಜ್ಞಮಾಡಿದರೂ ನಿಯಮಿತ ಹಬ್ಬಗಳಲ್ಲಿ ಯಜ್ಞಮಾಡಿದರೂ


ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.


“ಯೆಹೋವನಿಗೆ ವಿಶೇಷ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸಲು ಬಯಸಿದರೆ, ಆ ಕಾಣಿಕೆಯನ್ನು ಯೆಹೋವನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಅರ್ಪಿಸಬೇಕು.


“ಕಾಲು ಉದ್ದವಾಗಿರುವ ಅಥವಾ ಮೊಂಡಾಗಿರುವ ಹೋರಿಯನ್ನಾಗಲಿ ಕುರಿಯನ್ನಾಗಲಿ ಒಬ್ಬನು ಯೆಹೋವನಿಗೆ ಕಾಣಿಕೆಯಾಗಿ ಕೊಡಲು ಬಯಸಿದರೆ, ಆಗ ಅದು ಸ್ವೀಕೃತವಾಗುವುದು. ಆದರೆ, ಅವನು ಮಾಡಿದ ವಿಶೇಷ ಹರಕೆಯಾಗಿ ಅದು ಸ್ವೀಕೃತವಾಗುವುದಿಲ್ಲ. ಅದು ಸ್ವಇಚ್ಛೆಯಿಂದ ಅರ್ಪಿಸಿದ ಕಾಣಿಕೆಯಾಗಿ ಸ್ವೀಕರಿಸಲ್ಪಡುವುದು.


ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಈ ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಈ ಕಾಣಿಕೆಗಳು ಉಪಯೋಗಿಸಲ್ಪಟ್ಟವು.


“ಈ ದಿನ ನಾನು ಸಮಾಧಾನಯಜ್ಞವನ್ನು ಅರ್ಪಿಸಬೇಕಿತ್ತು. ನನ್ನ ಹರಕೆಯನ್ನು ಸಲ್ಲಿಸಿದೆನು. ಯಜ್ಞದಲ್ಲಿ ಉಳಿದ ಮಾಂಸ ನನ್ನಲ್ಲಿ ಬಹಳಷ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು