Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:24 - ಪರಿಶುದ್ದ ಬೈಬಲ್‌

24 ನೀವು ತನ್ನಷ್ಟಕ್ಕೆ ತಾನೇ ಸತ್ತ ಪ್ರಾಣಿಯ ಅಥವಾ ಬೇರೆ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಂದಿಗೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಂಥ ಪ್ರಾಣಿ ರೋಗದಿಂದ ಸತ್ತರೆ, ಇಲ್ಲವೆ ಕಾಡುಮೃಗದಿಂದ ಕೊಲ್ಲಲ್ಪಟ್ಟರೆ ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಿಕೊಳ್ಳಬಹುದು; ಆದರೆ ಎಷ್ಟು ಮಾತ್ರಕ್ಕೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅಂಥ ಪಶುವು ರೋಗದಿಂದ ಸತ್ತದ್ದಾದರೆ ಇಲ್ಲವೇ ಕಾಡು ಮೃಗವು ಕೊಂದದ್ದಾದರೆ ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ, ಕಾಡುಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವುದಕ್ಕಾದರೂ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:24
8 ತಿಳಿವುಗಳ ಹೋಲಿಕೆ  

“ನೀವು ನನ್ನ ವಿಶೇಷ ಜನರಾಗಿದ್ದೀರಿ. ಆದ್ದರಿಂದ ಕ್ರೂರಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಮಾಂಸವನ್ನು ನೀವು ತಿನ್ನಬಾರದು. ಅದನ್ನು ನಾಯಿಗಳು ತಿನ್ನಲಿ.


“ಯಾಜಕನು ಸತ್ತ ಪ್ರಾಣಿಯನ್ನಾಗಲಿ ಕ್ರೂರ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನಾಗಲಿ ತಿನ್ನಬಾರದು. ಅವನು ಅದನ್ನು ತಿಂದರೆ ಅಶುದ್ಧನಾಗುವನು. ನಾನೇ ಯೆಹೋವನು!


“ಅಲ್ಲದೆ ಯಾವನಾದರೂ ತನ್ನಷ್ಟಕ್ಕೆ ಸತ್ತ ಪ್ರಾಣಿಯನ್ನು ತಿಂದರೆ ಅಥವಾ ಬೇರೆ ಪ್ರಾಣಿಯಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನು ತಿಂದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿಕೊಳ್ಳಬೇಕು. ಅವನು ಇಸ್ರೇಲನಾಗಿದ್ದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾಗಿದ್ದರೂ ಹಾಗೆಯೇ ಮಾಡಬೇಕು.


ಯಾಜಕರು ಸ್ವಾಭಾವಿಕವಾಗಿ ಸತ್ತು ಅಥವಾ ವನ್ಯಜಂತುಗಳು ಕೊಂದಿರುವ ಯಾವ ಪ್ರಾಣಿಯಾಗಲಿ ಪಕ್ಷಿಯಾಗಲಿ ಅದರ ಮಾಂಸವನ್ನು ತಿನ್ನಬಾರದು.


ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”


“ಸತ್ತುಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಆ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕೆಂದರೆ ನೀವು ಯೆಹೋವನ ಜನರಾಗಿದ್ದೀರಿ; ಆತನ ಸ್ವಕೀಯ ಪ್ರಜೆಗಳಾಗಿದ್ದೀರಿ. ಆಡಿನ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ.


ಯಾವನಾದರೂ ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾದ ಪಶುವಿನ ಕೊಬ್ಬನ್ನು ತಿಂದರೆ, ಅವನನ್ನು ಅವನ ಜನರಿಂದ ತೆಗೆದುಹಾಕಬೇಕು.


ಮಾತ್ರವಲ್ಲದೆ, ನಿಮ್ಮ ಕುರಿದನಗಳಲ್ಲಿ ಚೊಚ್ಚಲಾದವುಗಳನ್ನು ನನಗೆ ಅರ್ಪಿಸಬೇಕು. ಚೊಚ್ಚಲಾದವುಗಳು ತನ್ನ ತಾಯಿಯೊಂದಿಗೆ ಏಳು ದಿನಗಳಿರಲಿ. ಬಳಿಕ, ಎಂಟನೆಯ ದಿನದಲ್ಲಿ ನೀವು ಅದನ್ನು ನನಗೆ ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು