Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:30 - ಪರಿಶುದ್ದ ಬೈಬಲ್‌

30 ಕಾಣಿಕೆಯ ಆ ಭಾಗವು ಅಗ್ನಿಯಲ್ಲಿ ಹೋಮಮಾಡಬೇಕು. ಅವನು ಕಾಣಿಕೆಯನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಗೆ ಹೋಗಬೇಕು. ಅವನು ಆ ಪಶುವಿನ ಕೊಬ್ಬನ್ನೂ ಎದೆಯ ಭಾಗವನ್ನೂ ಯಾಜಕನ ಬಳಿಗೆ ತರಬೇಕು. ಯೆಹೋವನ ಸನ್ನಿಧಿಯಲ್ಲಿ ಎದೆಯ ಭಾಗವು ನಿವಾಳಿಸಲ್ಪಡಬೇಕು. ಇದು ನೈವೇದ್ಯ ಸಮರ್ಪಣೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವುದಕ್ಕಾಗಿ ತಂದು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸರ್ವೇಶ್ವರನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪ್ರಾಣಿಯ ಕೊಬ್ಬನ್ನು ತನ್ನ ಕೈಯಿಂದಲೆ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಲು ತಂದು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದದ್ದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನೂ ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವದಕ್ಕಾಗಿ ತಂದು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವನು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಯೆಹೋವ ದೇವರ ಮುಂದೆ ನೈವೇದ್ಯರೂಪವಾಗಿ ನಿವಾಳಿಸುವದಕ್ಕೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:30
16 ತಿಳಿವುಗಳ ಹೋಲಿಕೆ  

ನೈವೇದ್ಯವಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ವಿಶೇಷ ಕಾಣಿಕೆಯಾಗಿ ನಿವಾಳಿಸಬೇಕು. ಇವುಗಳು ಪವಿತ್ರವಾಗಿದ್ದು ಯಾಜಕರ ಪಾಲಾಗುತ್ತವೆ. ಅಲ್ಲದೆ ಮೀಸಲಾಗಿಟ್ಟಿರುವ ನಿವಾಳಿಸಲ್ಪಟ್ಟ ಕಾಣಿಕೆಯ ಎದೆಯ ಭಾಗ ಮತ್ತು ತೊಡೆಯ ಭಾಗ ಸಹ ಯಾಜಕನ ಭಾಗವಾಗಿರುತ್ತದೆ. ಇದರ ನಂತರ ನಾಜೀರನು ದ್ರಾಕ್ಷಾರಸವನ್ನು ಕುಡಿಯಬಹುದು.


ಅವನು ಸಮಾಧಾನಯಜ್ಞದ ಪಶುವಿನ ವಪೆಯನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಪಿತ್ತಾಶಯದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನೂ ಯೆಹೋವನಿಗೋಸ್ಕರ ಸಮರ್ಪಿಸಬೇಕು.


ಅವನು ಸಮಾಧಾನಯಜ್ಞ ಪಶುವಿನ ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನು ಕರುಳುಗಳ ಮೇಲಿರುವ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೆಲ್ಲಾ ಹೋಮಮಾಡಬೇಕು.


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.


ಮೋಶೆ ಆಜ್ಞಾಪಿಸಿದಂತೆ ಎದೆಯ ಭಾಗಗಳನ್ನು ಮತ್ತು ಬಲ ತೊಡೆಯನ್ನು ಆರೋನನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.


ಬಳಿಕ ಮೋಶೆ ಅವೆಲ್ಲವುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಗಳಲ್ಲಿ ಇಟ್ಟು, ತುಂಡುಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.


ಮೋಶೆ ಎದೆಯ ಭಾಗವನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿದನು. ಅದು ಯಾಜಕರನ್ನು ನೇಮಿಸುವುದಕ್ಕಾಗಿ ಅರ್ಪಿಸಲ್ಪಟ್ಟ ಟಗರಿನಲ್ಲಿ ಮೋಶೆಯ ಪಾಲಾಗಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.


“ಮಾತ್ರವಲ್ಲದೆ ನೀನು, ನಿನ್ನ ಪುತ್ರರು ಮತ್ತು ನಿನ್ನ ಹೆಣ್ಣುಮಕ್ಕಳು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನು ಮತ್ತು ಅರ್ಪಿಸಲ್ಪಟ್ಟ ತೊಡೆಯನ್ನು ತಿನ್ನಬೇಕು. ನೀವು ಅವುಗಳನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿಲ್ಲ. ಆದರೆ ನೀವು ಅವುಗಳನ್ನು ಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಯಾಕೆಂದರೆ ಅವುಗಳು ಸಮಾಧಾನಯಜ್ಞಗಳಿಂದ ಬಂದವುಗಳಾಗಿವೆ. ಇಸ್ರೇಲರು ಆ ಕಾಣಿಕೆಗಳನ್ನು ದೇವರಿಗಾಗಿ ಕೊಡುತ್ತಾರೆ. ಜನರು ಆ ಪಶುಗಳಲ್ಲಿ ಕೆಲವು ಭಾಗಗಳನ್ನು ತಿನ್ನುತ್ತಾರೆ. ಆದರೆ ಎದೆಯ ಭಾಗವು ನಿಮ್ಮ ಪಾಲಾಗಿರುತ್ತದೆ.


ಆಗ ಆರೋನನು ಲೇವಿಯರನ್ನು ಯೆಹೋವನಿಗೆ ಇಸ್ರೇಲರ ಕಾಣಿಕೆಯಾಗಿ ಕೊಡುವನು. ಈ ರೀತಿಯಾಗಿ ಲೇವಿಯರು ಯೆಹೋವನ ಪರಿಚರ್ಯ ಕೆಲಸಕ್ಕಾಗಿ ಸಿದ್ಧರಾಗುವರು.


ಅವರು ಈ ಕೊಬ್ಬಿನ ಭಾಗಗಳನ್ನು ಹೋರಿಯ ಮತ್ತು ಟಗರಿನ ಎದೆಯ ಭಾಗಗಳ ಮೇಲೆ ಇಟ್ಟರು. ಆರೋನನು ಅವೆಲ್ಲವನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು.


ಜನರು ಪ್ರಾಣಿಗಳ ಕೊಬ್ಬನ್ನು ಅಗ್ನಿಯ ಮೂಲಕ ಹೋಮಮಾಡುವಾಗ, ಯಾಜಕರಿಗಾಗಿ ತೆಗೆದಿಟ್ಟ ತೊಡೆಯ ಭಾಗವನ್ನು ಮತ್ತು ನೈವೇದ್ಯವಾಗಿ ನಿವಾಳಿಸಬೇಕಾದ ಎದೆಯ ಭಾಗವನ್ನು ಯೆಹೋವನ ಸನ್ನಿಧಿಗೆ ತರಬೇಕು. ಅದು ನಿಮ್ಮ ಪಾಲಾಗಿರುವುದು. ಅದು ನಿನಗೂ ನಿನ್ನ ಮಕ್ಕಳಿಗೂ ಸೇರಿದ್ದು. ಯೆಹೋವನು ಆಜ್ಞಾಪಿಸಿದಂತೆ ಯಜ್ಞಗಳ ಆ ಭಾಗವು ಎಂದೆಂದೂ ನಿಮ್ಮ ಪಾಲಾಗಿರುತ್ತದೆ” ಎಂದು ಹೇಳಿದನು.


“ನೀವು ಯಜ್ಞಕ್ಕಾಗಿ ಒಂದು ದನವನ್ನಾಗಲಿ ಕುರಿಯನ್ನಾಗಲಿ ಕೊಯ್ದಾಗ ಯಾಜಕರಿಗೆ ಭುಜವನ್ನು, ಎರಡು ದವಡೆಗಳನ್ನು ಮತ್ತು ಉದರ ಭಾಗವನ್ನು ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು