Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:32 - ಪರಿಶುದ್ದ ಬೈಬಲ್‌

32 ನೀವು ಸಮಾಧಾನಯಜ್ಞದ ಪಶುವಿನ ಬಲತೊಡೆಯನ್ನು ಸಹ ಯಾಜಕನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲತೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನೀವು ಶಾಂತಿಸಮಾಧಾನದ ಬಲಿದ್ರವ್ಯಗಳಲ್ಲಿ ಪ್ರಾಣಿಯ ಬಲತೊಡೆಯನ್ನು ಯಾಜಕನಿಗಾಗಿ ಪ್ರತ್ಯೇಕಿಸಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲದೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಬಲಭುಜವನ್ನು ನೀವು ಯಾಜಕನಿಗೆ ಸಮಾಧಾನದ ಬಲಿಯಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:32
12 ತಿಳಿವುಗಳ ಹೋಲಿಕೆ  

ನೈವೇದ್ಯವಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ವಿಶೇಷ ಕಾಣಿಕೆಯಾಗಿ ನಿವಾಳಿಸಬೇಕು. ಇವುಗಳು ಪವಿತ್ರವಾಗಿದ್ದು ಯಾಜಕರ ಪಾಲಾಗುತ್ತವೆ. ಅಲ್ಲದೆ ಮೀಸಲಾಗಿಟ್ಟಿರುವ ನಿವಾಳಿಸಲ್ಪಟ್ಟ ಕಾಣಿಕೆಯ ಎದೆಯ ಭಾಗ ಮತ್ತು ತೊಡೆಯ ಭಾಗ ಸಹ ಯಾಜಕನ ಭಾಗವಾಗಿರುತ್ತದೆ. ಇದರ ನಂತರ ನಾಜೀರನು ದ್ರಾಕ್ಷಾರಸವನ್ನು ಕುಡಿಯಬಹುದು.


ಮೋಶೆ ಆಜ್ಞಾಪಿಸಿದಂತೆ ಎದೆಯ ಭಾಗಗಳನ್ನು ಮತ್ತು ಬಲ ತೊಡೆಯನ್ನು ಆರೋನನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.


ನೈವೇದ್ಯರೂಪವಾಗಿ ನಿವಾಳಿಸುವ ಸಮರ್ಪಣೆಯಲ್ಲಿ ಪಶುವಿನ ಎದೆಯ ಭಾಗವನ್ನು ಮತ್ತು ಸಮಾಧಾನಯಜ್ಞಗಳಲ್ಲಿ ಪಶುವಿನ ಬಲ ತೊಡೆಯನ್ನು ಯೆಹೋವನಾದ ನಾನು ಇಸ್ರೇಲರಿಂದ ತೆಗೆದುಕೊಂಡು ಆರೋನನಿಗೂ ಅವನ ಪುತ್ರರಿಗೂ ಕೊಡುತ್ತಿದ್ದೇನೆ. ಇಸ್ರೇಲರು ಈ ನಿಯಮಕ್ಕೆ ಎಂದೆಂದಿಗೂ ವಿಧೇಯರಾಗಬೇಕು.”


“ನೀವು ಯಜ್ಞಕ್ಕಾಗಿ ಒಂದು ದನವನ್ನಾಗಲಿ ಕುರಿಯನ್ನಾಗಲಿ ಕೊಯ್ದಾಗ ಯಾಜಕರಿಗೆ ಭುಜವನ್ನು, ಎರಡು ದವಡೆಗಳನ್ನು ಮತ್ತು ಉದರ ಭಾಗವನ್ನು ಕೊಡಬೇಕು.


“ಮಾತ್ರವಲ್ಲದೆ ನೀನು, ನಿನ್ನ ಪುತ್ರರು ಮತ್ತು ನಿನ್ನ ಹೆಣ್ಣುಮಕ್ಕಳು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನು ಮತ್ತು ಅರ್ಪಿಸಲ್ಪಟ್ಟ ತೊಡೆಯನ್ನು ತಿನ್ನಬೇಕು. ನೀವು ಅವುಗಳನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿಲ್ಲ. ಆದರೆ ನೀವು ಅವುಗಳನ್ನು ಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಯಾಕೆಂದರೆ ಅವುಗಳು ಸಮಾಧಾನಯಜ್ಞಗಳಿಂದ ಬಂದವುಗಳಾಗಿವೆ. ಇಸ್ರೇಲರು ಆ ಕಾಣಿಕೆಗಳನ್ನು ದೇವರಿಗಾಗಿ ಕೊಡುತ್ತಾರೆ. ಜನರು ಆ ಪಶುಗಳಲ್ಲಿ ಕೆಲವು ಭಾಗಗಳನ್ನು ತಿನ್ನುತ್ತಾರೆ. ಆದರೆ ಎದೆಯ ಭಾಗವು ನಿಮ್ಮ ಪಾಲಾಗಿರುತ್ತದೆ.


ಬಳಿಕ ಆರೋನನನ್ನು ಮಹಾಯಾಜಕನನ್ನಾಗಿ ಮಾಡಲು ನಿವಾಳಿಸಲ್ಪಟ್ಟ ಟಗರಿನ ಎದೆಯ ಭಾಗವನ್ನೂ ಯಾಜಕರ ಭಾಗವಾದ ನಿವಾಳಿಸಲ್ಪಟ್ಟ ಟಗರಿನ ತೊಡೆಯನ್ನೂ ತೆಗೆದುಕೊ. ಅವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಇದು ಕಾಣಿಕೆಯ ವಿಶೇಷ ಭಾಗವಾಗಿದೆ.


ಪಶುವಿನ ಬಲ ತೊಡೆಯ ಭಾಗವು ಸಮಾಧಾನಯಜ್ಞದಲ್ಲಿ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುವ ಯಾಜಕನಿಗೆ ಸೇರುತ್ತವೆ.


“ಒಬ್ಬನು ದೇವರಿಗೆ ವಿಶೇಷ ಕಾಣಿಕೆಯನ್ನು ಅರ್ಪಿಸಿದರೆ, ಅದನ್ನು ಸ್ವೀಕರಿಸುವ ಯಾಜಕನು ತನಗಾಗಿ ಅದನ್ನು ಇಟ್ಟುಕೊಳ್ಳಬಹುದು. ಅದು ಅವನದಾಗಿರುತ್ತದೆ. ಒಬ್ಬನು ಈ ವಿಶೇಷ ಕಾಣಿಕೆಗಳನ್ನು ಕೊಡಬೇಕಾಗಿಲ್ಲ. ಆದರೆ ಅವನು ಅವುಗಳನ್ನು ಕೊಟ್ಟರೆ ಅವು ಯಾಜಕನಿಗೆ ಸೇರುತ್ತವೆ.”


ಅಡಿಗೆಯವನು ತೊಡೆಯ ಮಾಂಸವನ್ನು ತೆಗೆದುಕೊಂಡು ಬಂದು ಸೌಲನ ಎದುರಿಗೆ ಮೇಜಿನ ಮೇಲಿಟ್ಟನು. ಸಮುವೇಲನು, “ನಾನು ನಿನಗಾಗಿ ಈ ಮಾಂಸವನ್ನು ಪ್ರತ್ಯೇಕವಾಗಿರಿಸಿದ್ದೇನೆ. ಇದನ್ನು ತಿನ್ನು, ಏಕೆಂದರೆ ಇದನ್ನು ಈ ವಿಶೇಷವಾದ ಸಂದರ್ಭದಲ್ಲಿ ನಿನಗೆ ಕೊಡುವುದಕ್ಕಾಗಿಯೇ ಪ್ರತ್ಯೇಕಿಸಲಾಗಿತ್ತು” ಎಂದು ಹೇಳಿದನು. ಆದ್ದರಿಂದ ಸೌಲನು ಸಮುವೇಲನ ಜೊತೆಯಲ್ಲಿ ಆ ದಿನ ಊಟಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು