Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:35 - ಪರಿಶುದ್ದ ಬೈಬಲ್‌

35 ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳಲ್ಲಿ ಇವೇ ಆರೋನನಿಗೂ ಅವನ ಪುತ್ರರಿಗೂ ಕೊಡಲ್ಪಟ್ಟ ಭಾಗಗಳಾಗಿವೆ. ಆರೋನನೂ ಅವನ ಪುತ್ರರೂ ಯೆಹೋವನ ಯಾಜಕರಾಗಿ ಸೇವೆ ಮಾಡುವಾಗಲೆಲ್ಲಾ ಯಜ್ಞಗಳಲ್ಲಿ ಆ ಪಾಲನ್ನು ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಸರ್ವೇಶ್ವರನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶಜರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳು. ಮೋಶೆ ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಯಾಜಕ ಸೇವಾವೃತ್ತಿಗಾಗಿ ಪ್ರತಿಷ್ಠಾಪಿಸಿದ ದಿನದಂದೇ ಇದು ನೇಮಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. [ಮೋಶೆ] ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆರೋನನ ಅಭಿಷೇಕದ ಮತ್ತು ಅವನ ಮಕ್ಕಳ ಅಭಿಷೇಕದ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಯೆಹೋವ ದೇವರಿಗೆ ಒಪ್ಪಿಸಿಕೊಳ್ಳುವಾಗ, ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸುವ ಬಲಿಗಳಲ್ಲಿ ಇರುವ ಪಾಲು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:35
15 ತಿಳಿವುಗಳ ಹೋಲಿಕೆ  

ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.


ಪರಿಶುದ್ಧವಾಗಿರುವಾತನು (ದೇವರು ಅಥವಾ ಕ್ರಿಸ್ತನು) ಕೊಟ್ಟಿರುವ ವರವನ್ನು ನೀವು ಹೊಂದಿದ್ದೀರಿ. ಆದ್ದರಿಂದ ನೀವೆಲ್ಲರೂ ಸತ್ಯವನ್ನು ತಿಳಿದಿದ್ದೀರಿ.


ನಿಮ್ಮನ್ನು ಮತ್ತು ನಮ್ಮನ್ನು ಕ್ರಿಸ್ತನಲ್ಲಿ ದೃಢಗೊಳಿಸುವಾತನು ದೇವರೇ. ದೇವರು ತನ್ನ ವಿಶೇಷವಾದ ಆಶೀರ್ವಾದವನ್ನು ನಮಗೆ ಕೊಟ್ಟಿದ್ದಾನೆ.


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


ಅಶ್ಶೂರವು ನಿಮಗೆ ಸಂಕಟವನ್ನು ಉಂಟುಮಾಡುವದು. ಅದು ನಿಮಗೆ ನಿತ್ಯವೂ ಹೊರುವ ಭಾರವಾಗಿ ಪರಿಣಮಿಸುವದು. ನಿಮ್ಮ ಹೆಗಲಿನ ಮೇಲೆ ನೊಗವನ್ನು ಹಾಕುವದು. ಆದರೆ ಅದು ತೆಗೆದುಹಾಕಲ್ಪಡುವದು. ಅದು ನಿನ್ನ ದೇವರ ಶಕ್ತಿಯಿಂದ ಮುರಿಯಲ್ಪಡುವದು.


ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಮತ್ತು ವೇದಿಕೆಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮೇಲೆ ಮತ್ತು ಅವನ ಯಾಜಕವಸ್ತ್ರದ ಮೇಲೆ ಚಿಮಿಕಿಸಿದನು; ಆರೋನನ ಜೊತೆ ಇದ್ದ ಅವನ ಪುತ್ರರ ಮೇಲೆ ಮತ್ತು ಅವರ ಬಟ್ಟೆಗಳ ಮೇಲೆ ಚಿಮಿಕಿಸಿದನು. ಹೀಗೆ ಮೋಶೆಯು ಆರೋನನನ್ನೂ ಅವನ ಯಾಜಕವಸ್ತ್ರವನ್ನೂ ಅವನ ಪುತ್ರರನ್ನೂ ಅವರ ಯಾಜಕ ವಸ್ತ್ರಗಳನ್ನೂ ಪವಿತ್ರಗೊಳಿಸಿದನು.


ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು.


ಅಭಿಷೇಕತೈಲವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಸುರಿ.


ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಆರೋನನು ಮತ್ತು ಅವನ ಗಂಡುಮಕ್ಕಳು ಅಭಿಷೇಕಿಸಲ್ಪಟ್ಟ ಮತ್ತು ಪ್ರತ್ಯೇಕಿಸಲ್ಪಟ್ಟ ಯಾಜಕರಾಗಿ ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡಲು ಅವರು ಮಾಡತಕ್ಕದ್ದೇನೆಂಬುದನ್ನು ನಾನೀಗ ಹೇಳುವೆನು. ಯಾವ ಅಂಗದೋಷವಿಲ್ಲದ ಒಂದು ಹೋರಿಮರಿಯನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಿಂದ ನಿನ್ನ ಬಳಿಗೆ ಬರಲು ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಾದ ನಾದಾಬ, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೂ ಹೇಳು. ಇವರು ಯಾಜಕರಾಗಿ ನನ್ನ ಸೇವೆ ಮಾಡುವರು.


ಇಸ್ರೇಲಿನ ಎಲ್ಲಾ ಕುಲಗಳಲ್ಲಿ ನಿನ್ನ ಕುಟುಂಬದವರನ್ನು ನನ್ನ ಯಾಜಕರನ್ನಾಗಿ ಆರಿಸಿಕೊಂಡೆನು. ಏಫೋದನ್ನು ಧರಿಸಿಕೊಳ್ಳುವುದಕ್ಕೂ ಯಜ್ಞವನ್ನು ಅರ್ಪಿಸುವುದಕ್ಕೂ ಧೂಪಹಾಕುವುದಕ್ಕೂ ನಾನು ಅವರನ್ನು ಆರಿಸಿಕೊಂಡೆನು. ಇಸ್ರೇಲರು ನನಗೆ ಅರ್ಪಿಸುವ ಯಜ್ಞಗಳಲ್ಲಿ ಮಾಂಸವನ್ನು ಪಡೆಯುವ ಅವಕಾಶವನ್ನೂ ನಾನು ನಿಮ್ಮ ಕುಲದವರಿಗೆ ನೀಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು