Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:37 - ಪರಿಶುದ್ದ ಬೈಬಲ್‌

37 ಅವುಗಳೇ ಸರ್ವಾಂಗಹೋಮಗಳ, ಧಾನ್ಯಸಮರ್ಪಣೆಗಳ, ಪಾಪಪರಿಹಾರಕ ಯಜ್ಞಗಳ, ದೋಷಪರಿಹಾರಕ ಯಜ್ಞಗಳ, ಸಮಾಧಾನಯಜ್ಞಗಳ ಮತ್ತು ಯಾಜಕರನ್ನು ಪ್ರತಿಷ್ಠಿಸುವ ನಿಯಮಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ದಹನಬಲಿದಾನ, ಧಾನ್ಯನೈವೇದ್ಯ, ದೋಷಪರಿಹಾರಕ ಬಲಿ, ಪ್ರಾಯಶ್ಚಿತ್ತ ಬಲಿ, ಯಾಜಕ ಅಭ್ಯಂಜನ ಬಲಿ, ಶಾಂತಿಸಮಾಧಾನ ಬಲಿ ಎಂಬ ಇವುಗಳ ವಿಷಯದಲ್ಲಿ ಮೇಲೆ ಹೇಳಿದ್ದೇ ಬಲಿದಾನ ವಿಧಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ, ಸಮಾಧಾನ ಯಜ್ಞ ಎಂಬಿವುಗಳ ವಿಷಯದಲ್ಲಿ ಮೇಲೆ ಕಂಡದ್ದೆ ವಿಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ದಹನಬಲಿ, ಧಾನ್ಯ ಬಲಿ, ಪಾಪ ಪರಿಹಾರದ ಬಲಿ, ಪ್ರಾಯಶ್ಚಿತ್ತದ ಬಲಿ, ಪ್ರತಿಷ್ಠೆಗಳ ಮತ್ತು ಸಮಾಧಾನದ ಬಲಿಗಳ ಉಪದೇಶಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:37
11 ತಿಳಿವುಗಳ ಹೋಲಿಕೆ  

ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಆರೋನನು ಮತ್ತು ಅವನ ಗಂಡುಮಕ್ಕಳು ಅಭಿಷೇಕಿಸಲ್ಪಟ್ಟ ಮತ್ತು ಪ್ರತ್ಯೇಕಿಸಲ್ಪಟ್ಟ ಯಾಜಕರಾಗಿ ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡಲು ಅವರು ಮಾಡತಕ್ಕದ್ದೇನೆಂಬುದನ್ನು ನಾನೀಗ ಹೇಳುವೆನು. ಯಾವ ಅಂಗದೋಷವಿಲ್ಲದ ಒಂದು ಹೋರಿಮರಿಯನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.


“ಆರೋನನು ಮಹಾಯಾಜಕನಾಗಿ ಅಭಿಷೇಕಿಸಲ್ಪಡುವ ದಿನದಂದು ಅವನು ಮತ್ತು ಅವನ ಪುತ್ರರು ಯೆಹೋವನ ಸನ್ನಿಧಿಗೆ ತರಬೇಕಾದ ಧಾನ್ಯಸಮರ್ಪಣೆ ಇದಾಗಿದೆ. ಅವರು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯನೈವೇದ್ಯಕ್ಕಾಗಿ ತರಬೇಕು. (ದಿನನಿತ್ಯದ ನೈವೇದ್ಯಗಳ ಸಮಯಗಳಲ್ಲಿ ಇದನ್ನು ಅರ್ಪಿಸಬೇಕು.) ಅವರು ಇದರಲ್ಲಿ ಅರ್ಧದಷ್ಟನ್ನು ಮುಂಜಾನೆಯಲ್ಲಿ ಮತ್ತು ಉಳಿದರ್ಧವನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು.


ಯೆಹೋವನು ಮೋಶೆಯನ್ನು ಕರೆದು ದೇವದರ್ಶನಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು:


“ಬಳಿಕ ಟಗರಿನ ಕೊಬ್ಬನ್ನೂ ತೆಗೆದುಕೊ. (ಇದು ಆರೋನನನ್ನು ಮಹಾಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು.) ಬಾಲದ ಸುತ್ತಲಿರುವ ಕೊಬ್ಬನ್ನು, ದೇಹದ ಒಳಗಿನ ಅಂಗಗಳನ್ನು ಮುಚ್ಚಿಕೊಂಡಿರುವ ಕೊಬ್ಬನ್ನು, ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಮತ್ತು ಬಲತೊಡೆಯನ್ನು ತೆಗೆದುಕೊ.


“ಅವನು ಕುರಿಮರಿಯನ್ನು ಕೊಡುವುದಕ್ಕೆ ಶಕ್ತನಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಅವುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವನ್ನಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಸಮರ್ಪಿಸಬೇಕು.


ಬಳಿಕ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವುದಕ್ಕೆ ವಧಿಸಬೇಕಾದ ಎರಡನೆಯ ಟಗರನ್ನು ತಂದನು. ಆರೋನನೂ ಅವನ ಪುತ್ರರೂ ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.


ಆಗ ಮೋಶೆ ಟಗರನ್ನು ವಧಿಸಿ ಅದರ ಸ್ವಲ್ಪ ರಕ್ತವನ್ನು ಆರೋನನ ಬಲಗಿವಿಯ ತುದಿಗೂ ಅವನ ಬಲಗೈಯ ಹೆಬ್ಬೆರಳಿಗೂ ಅವನ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು