ಯಾಜಕಕಾಂಡ 7:6 - ಪರಿಶುದ್ದ ಬೈಬಲ್6 “ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೋಮ ಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರು ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರ ಸ್ಥಳದೊಳಗೇ ಅದನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿ |
ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.