ಯಾಜಕಕಾಂಡ 7:7 - ಪರಿಶುದ್ದ ಬೈಬಲ್7 ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಒಂದೇ ರೀತಿಯ ನಿಯಮಗಳು ಈ ಎರಡು ಸಮರ್ಪಣೆಗಳಿಗೆ ಅನ್ವಯಿಸುತ್ತವೆ. ಯಜ್ಞ ಸಮರ್ಪಿಸುವ ಯಾಜಕನು ಆಹಾರಕ್ಕಾಗಿ ಅದರ ಮಾಂಸವನ್ನು ಪಡೆಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ಮತ್ತು ದೋಷಪರಿಹಾರಕ ಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ನಿಯಮಯುಂಟು; ಹೇಗೆಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈ ಪ್ರಾಯಶ್ಚಿತ್ತ ಹಾಗು ದೋಷಪರಿಹಾರಕ ಬಲಿ ಹೋಮ ಶೇಷಗಳಿಗೆ ಇರುವ ವಿಧಿ ಒಂದೇ; ಈ ಹೋಮಶೇಷಗಳು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ದೋಷಪರಿಹಾರಕಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ವಿಧಿಯುಂಟು; ಹೇಗಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ ‘ಪಾಪ ಪರಿಹಾರದ ಬಲಿಯ ಹಾಗೆಯೇ ಪ್ರಾಯಶ್ಚಿತ್ತದ ಬಲಿಯೂ ಆಗಿದೆ. ಅವುಗಳಿಗೆ ಇರುವುದು ಒಂದೇ ನಿಯಮ, ಅವುಗಳಿಂದ ಪ್ರಾಯಶ್ಚಿತ್ತ ಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |