Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:8 - ಪರಿಶುದ್ದ ಬೈಬಲ್‌

8 ಯಜ್ಞಮಾಡುವ ಯಾಜಕನು ಸರ್ವಾಂಗಹೋಮ ಪಶುವಿನ ಚರ್ಮವನ್ನು ಪಡೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾರಾದರೂ ಸರ್ವಾಂಗಹೋಮಕ್ಕಾಗಿ ಪಶುವನ್ನು ತಂದಾಗ ಅದರ ಚರ್ಮವು ಆ ಪಶುವನ್ನು ಸಮರ್ಪಿಸುವ ಯಾಜಕನದ್ದಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯಾರಾದರು ದಹನಬಲಿಗಾಗಿ ಒಂದು ಪ್ರಾಣಿಯನ್ನು ತಂದಾಗ, ಅದರ ಚರ್ಮ ಆ ಪಶುವನ್ನು ಸಮರ್ಪಿಸುವ ಯಾಜಕನಿಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾರಾದರೂ ಸರ್ವಾಂಗಹೋಮಕ್ಕಾಗಿ ಪಶುವನ್ನು ತಂದಾಗ ಅದರ ಚರ್ಮವು ಆ ಪಶುವನ್ನು ಸಮರ್ಪಿಸುವ ಯಾಜಕನದಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:8
9 ತಿಳಿವುಗಳ ಹೋಲಿಕೆ  

ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.


ಬಳಿಕ ಅವನು ಆ ಹಸುವನ್ನು ಚರ್ಮ, ಮಾಂಸ, ರಕ್ತ ಮತ್ತು ಕಲ್ಮಶಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಬೇಕು.


ಆದರೆ ಯಾಜಕನು ಹೋರಿಯ ಚರ್ಮವನ್ನು, ಒಳಗಿನ ಭಾಗಗಳನ್ನು, ದೇಹದ ಕಲ್ಮಶವನ್ನು, ಎಲ್ಲಾ ಮಾಂಸವನ್ನು ಮತ್ತು ತಲೆಕಾಲುಗಳನ್ನು ಹೊರಗೆ ತೆಗೆದುಕೊಂಡು ಪಾಳೆಯದ ಹೊರಗೆ ಬೂದಿಯನ್ನು ಸುರಿಯುವ ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಕಟ್ಟಿಗೆಯ ಮೇಲಿಟ್ಟು ಬೆಂಕಿಯಲ್ಲಿ ಸುಟ್ಟುಹಾಕಬೇಕು. ಬೂದಿಯನ್ನು ಸುರಿಯುವ ಸ್ಥಳದಲ್ಲಿಯೇ ಅದನ್ನು ಸುಡಬೇಕು.


ಯಾಜಕನು ಆ ಪಶುವಿನ ಚರ್ಮವನ್ನು ಸುಲಿದು, ಪಶುವನ್ನು ತುಂಡುತುಂಡುಗಳಾಗಿ ಕಡಿಯಬೇಕು.


ಬಳಿಕ ಹೋರಿಯ ಮಾಂಸ, ಚರ್ಮ, ಇತರ ಭಾಗಗಳನ್ನು ತೆಗೆದುಕೊಂಡು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಟ್ಟುಬಿಡು. ಇದು ಯಾಜಕರ ಪಾಪಗಳನ್ನು ಪರಿಹರಿಸುವ ಕಾಣಿಕೆಯಾಗಿದೆ.


ದೇವರಾದ ಯೆಹೋವನು ಪ್ರಾಣಿಯ ಚರ್ಮದಿಂದ ಉಡುಪುಗಳನ್ನು ಮಾಡಿ ಆದಾಮನಿಗೆ ಮತ್ತು ಅವನ ಹೆಂಡತಿಗೆ ತೊಡಿಸಿದನು.


ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಒಂದೇ ರೀತಿಯ ನಿಯಮಗಳು ಈ ಎರಡು ಸಮರ್ಪಣೆಗಳಿಗೆ ಅನ್ವಯಿಸುತ್ತವೆ. ಯಜ್ಞ ಸಮರ್ಪಿಸುವ ಯಾಜಕನು ಆಹಾರಕ್ಕಾಗಿ ಅದರ ಮಾಂಸವನ್ನು ಪಡೆಯುವನು.


ಪ್ರತಿ ಧಾನ್ಯಸಮರ್ಪಣೆಯು ಅದನ್ನು ಅರ್ಪಿಸುವ ಯಾಜಕನಿಗೆ ಸೇರುತ್ತದೆ. ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ಧಾನ್ಯಸಮರ್ಪಣೆಗಳನ್ನು ಯಾಜಕನು ಪಡೆಯುವನು.


ಆ ಲೇವಿಯನು ಇತರ ಲೇವಿಯರೊಂದಿಗೆ ಸಮಾನ ಪಾಲನ್ನು ಹೊಂದುವನು. ಇದಲ್ಲದೆ ಅವನ ಕುಟುಂಬದವರು ಯಥಾಪ್ರಕಾರ ತಮಗೆ ಬರತಕ್ಕ ಪಾಲನ್ನೂ ಹೊಂದುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು