ಯಾಜಕಕಾಂಡ 8:11 - ಪರಿಶುದ್ದ ಬೈಬಲ್11 ಮೋಶೆಯು ಅಭಿಷೇಕತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ವೇದಿಕೆಯ ಮೇಲೆ ಏಳು ಸಲ ಚಿಮಿಕಿಸಿದನು. ಮೋಶೆಯು ತೈಲವನ್ನು ವೇದಿಕೆಯ ಮೇಲೆ, ಅದರ ಎಲ್ಲಾ ಉಪಕರಣಗಳ ಮೇಲೆ ಚಿಮಿಕಿಸಿದನು. ಮೋಶೆಯು ತೈಲವನ್ನು ಗಂಗಾಳ ಮತ್ತು ಅದರ ಪೀಠದ ಮೇಲೂ ಚಿಮಿಕಿಸಿದನು. ಈ ರೀತಿಯಾಗಿ ಮೋಶೆ ಅವುಗಳನ್ನು ಪವಿತ್ರಗೊಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಲಿಪೀಠದ ಮೇಲೆ ಏಳು ಸಾರಿ ಆ ಎಣ್ಣೆಯನ್ನು ಚಿಮುಕಿಸಿ ಬಲಿಪೀಠವನ್ನು, ಅದರ ಎಲ್ಲ ಉಪಕರಣಗಳನ್ನು ಹಾಗು ನೀರಿನ ತೊಟ್ಟಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿವಿುಕಿಸಿ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನು ಅದರಿಂದ ಬಲಿಪೀಠದ ಮೇಲೆ ಏಳು ಸಾರಿ ಚಿಮುಕಿಸಿ, ಬಲಿಪೀಠವನ್ನೂ, ಅದರ ಎಲ್ಲಾ ಪಾತ್ರೆಗಳನ್ನೂ, ಗಂಗಾಳವನ್ನೂ, ಅದರ ಕಾಲನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು. ಅಧ್ಯಾಯವನ್ನು ನೋಡಿ |