Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:12 - ಪರಿಶುದ್ದ ಬೈಬಲ್‌

12 ಬಳಿಕ ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಆರೋನನ ತಲೆಗೆ ಹೊಯಿದು ಅವನನ್ನು ಪವಿತ್ರಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಎಣ್ಣೆಯಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದರಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯಿದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ಅಭಿಷೇಕ ತೈಲದಿಂದ ಆರೋನನ ತಲೆಯ ಮೇಲೆ ಸುರಿದು, ಅವನನ್ನು ಪವಿತ್ರ ಮಾಡುವುದಕ್ಕಾಗಿ ಅವನನ್ನು ಅಭಿಷೇಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:12
9 ತಿಳಿವುಗಳ ಹೋಲಿಕೆ  

“ಆರೋನನನ್ನು ಮತ್ತು ಅವನ ಪುತ್ರರನ್ನು ಈ ತೈಲದಿಂದ ಅಭಿಷೇಕಿಸು. ಅವರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾರೆಂದು ಇದು ತೋರಿಸುವುದು. ಆಗ ಅವರು ಅಭಿಷೇಕಿಸಲ್ಪಟ್ಟ ಯಾಜಕರಾಗಿ ನನ್ನ ಸೇವೆಮಾಡಬಹುದು.


ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು;


ಅಭಿಷೇಕತೈಲವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಸುರಿ.


“ಅಭಿಷಿಕ್ತನಾದ ಯಾಜಕನು ತಪ್ಪುಮಾಡಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಅರ್ಪಿಸಬೇಕು.


ನಿನ್ನ ಸಹೋದರನಾದ ಆರೋನನಿಗೆ ಮತ್ತು ಅವನ ಗಂಡುಮಕ್ಕಳಿಗೆ ಬಟ್ಟೆಗಳನ್ನು ತೊಡಿಸು. ಬಳಿಕ ಅವರನ್ನು ಯಾಜಕರನ್ನಾಗಿ ಮಾಡಲು ವಿಶೇಷ ತೈಲದಿಂದ ಅಭಿಷೇಕಿಸು. ಇದು ಅವರನ್ನು ಪ್ರತಿಷ್ಠಿಸುವುದು ಮತ್ತು ಪವಿತ್ರರನ್ನಾಗಿ ಮಾಡುವುದು. ಅವರು ಯಾಜಕರಾಗಿ ನನ್ನ ಸೇವೆ ಮಾಡುವರು.


ಯೆಹೋವನು ಯಾಜಕರನ್ನು ಅಭಿಷೇಕಿಸಿದ ಸಮಯದಲ್ಲಿ ಆತನು ಯಾಜಕರಿಗೆ ಆ ಭಾಗಗಳನ್ನು ಕೊಡಬೇಕೆಂಬುದಾಗಿ ಇಸ್ರೇಲರಿಗೆ ಆಜ್ಞಾಪಿಸಿದನು. ಜನರು ಯಾಜಕರಿಗೆ ಆ ಭಾಗಗಳನ್ನು ಎಂದೆಂದಿಗೂ ಕೊಡಬೇಕು.


ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಮತ್ತು ವೇದಿಕೆಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮೇಲೆ ಮತ್ತು ಅವನ ಯಾಜಕವಸ್ತ್ರದ ಮೇಲೆ ಚಿಮಿಕಿಸಿದನು; ಆರೋನನ ಜೊತೆ ಇದ್ದ ಅವನ ಪುತ್ರರ ಮೇಲೆ ಮತ್ತು ಅವರ ಬಟ್ಟೆಗಳ ಮೇಲೆ ಚಿಮಿಕಿಸಿದನು. ಹೀಗೆ ಮೋಶೆಯು ಆರೋನನನ್ನೂ ಅವನ ಯಾಜಕವಸ್ತ್ರವನ್ನೂ ಅವನ ಪುತ್ರರನ್ನೂ ಅವರ ಯಾಜಕ ವಸ್ತ್ರಗಳನ್ನೂ ಪವಿತ್ರಗೊಳಿಸಿದನು.


ಆದರೆ ನೀವು ದೇವದರ್ಶನಗುಡಾರದ ಬಾಗಿಲನ್ನು ಸಹ ಬಿಟ್ಟುಹೋಗಬಾರದು. ಇಲ್ಲವಾದರೆ ನೀವು ಸಾಯುವಿರಿ! ಯಾಕೆಂದರೆ, ಯೆಹೋವನ ಅಭಿಷೇಕತೈಲವು ನಿಮ್ಮ ಮೇಲಿದೆ” ಎಂದು ಹೇಳಿದನು. ಆದ್ದರಿಂದ ಆರೋನ, ಎಲ್ಲಾಜಾರ್ ಮತ್ತು ಈತಾಮಾರ್ ಮೋಶೆಯ ಮಾತಿಗೆ ವಿಧೇಯರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು