ಯಾಜಕಕಾಂಡ 8:13 - ಪರಿಶುದ್ದ ಬೈಬಲ್13 ಬಳಿಕ ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟನ್ನು ಕಟ್ಟಿದನು. ಬಳಿಕ ಅವರ ತಲೆಗಳಿಗೆ ಮುಂಡಾಸಗಳನ್ನು ಇಟ್ಟನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅನಂತರ ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ಪೇಟಗಳನ್ನು ತೊಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟುಗಳನ್ನು ಸುತ್ತಿ ಮುಂಡಾಸಗಳನ್ನು ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ, ಅವರ ನಡುಗಳನ್ನು ನಡುಕಟ್ಟುಗಳಿಂದ ಕಟ್ಟಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಹಾಕಿದನು. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.