Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:15 - ಪರಿಶುದ್ದ ಬೈಬಲ್‌

15 ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ ಯಜ್ಞವೇದಿಯನ್ನು ಶುದ್ಧಪಡಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಯಜ್ಞವೇದಿಯ ನಿವಿುತ್ತ ದೋಷಪರಿಹಾರಕಾಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು ಅದನ್ನು ವಧಿಸಿದನು. ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಸುತ್ತಲೂ ಇರುವ ಕೊಂಬುಗಳ ಮೇಲೆ ತನ್ನ ಬೆರಳಿನಿಂದ ಹಚ್ಚಿ, ಬಲಿಪೀಠವನ್ನು ಶುದ್ಧೀಕರಿಸಿ, ಉಳಿದ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಅದನ್ನು ಪವಿತ್ರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:15
23 ತಿಳಿವುಗಳ ಹೋಲಿಕೆ  

ಯಾಜಕನು ಸ್ವಲ್ಪ ರಕ್ತವನ್ನು ಧೂಪವೇದಿಕೆಯ ಮೂಲೆಗಳಿಗೆ ಹಚ್ಚಬೇಕು. (ಈ ವೇದಿಕೆಯು ಯೆಹೋವನ ಸನ್ನಿಧಿಯಲ್ಲಿರುವ ದೇವದರ್ಶನಗುಡಾರದಲ್ಲಿದೆ.) ಯಾಜಕನು ಹೋರಿಯ ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿಯಬೇಕು. (ಈ ವೇದಿಕೆಯು ದೇವದರ್ಶನಗುಡಾರದ ಬಾಗಿಲಲ್ಲಿ ಇರುತ್ತದೆ.)


ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


ಈ ಎರಡು ಜನಾಂಗಗಳ ನಡುವೆ ಇದ್ದ ದ್ವೇಷವನ್ನು ಕ್ರಿಸ್ತನು ಶಿಲುಬೆಯ ಮೂಲಕ ಕೊನೆಗೊಳಿಸಿದನು. ಈ ಜನಾಂಗಗಳು ಒಂದೇ ದೇಹವಾದ ಬಳಿಕ ಅವರನ್ನು ದೇವರ ಬಳಿಗೆ ನಡೆಸಬೇಕೆಂಬುದು ಕ್ರಿಸ್ತನ ಬಯಕೆಯಾಗಿತ್ತು. ಶಿಲುಬೆಯ ಮೇಲೆ ಪ್ರಾಣಕೊಡುವುದರ ಮೂಲಕ ಕ್ರಿಸ್ತನು ತನ್ನ ಈ ಬಯಕೆಯನ್ನು ಪೂರೈಸಿದನು.


ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ.


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ಯಾರಾದರೂ ಆಕಸ್ಮಿಕವಾಗಿ ಅಥವಾ ತಿಳಿಯದೆ ಪಾಪಮಾಡಿದ್ದಲ್ಲಿ, ಹೀಗೆಯೇ ತಿಂಗಳಿನ ಏಳನೇ ದಿವಸದಲ್ಲಿಯೂ ಮಾಡಬೇಕು. ಈ ರೀತಿಯಾಗಿ ಆಲಯವನ್ನು ಶುದ್ಧೀಕರಿಸುವಿರಿ.


“ಹೀಗೆ ಆರೋನನು ಮಹಾ ಪವಿತ್ರಸ್ಥಳವನ್ನೂ ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಶುದ್ಧೀಕರಿಸುವನು. ಬಳಿಕ ಆರೋನನು ಜೀವಂತವಾಗಿರುವ ಹೋತವನ್ನು ಯೆಹೋವನ ಬಳಿಗೆ ತರುವನು.


ಆದರೆ ಪಾಪಪರಿಹಾರಕ ಯಜ್ಞದ ರಕ್ತವನ್ನು ದೇವದರ್ಶನಗುಡಾರದೊಳಗೆ ತೆಗೆದುಕೊಂಡು ಹೋಗಿ, ಜನರನ್ನು ಶುದ್ಧಿಗೊಳಿಸಲು ಪವಿತ್ರಸ್ಥಳದಲ್ಲಿ ಉಪಯೋಗಿಸಿದರೆ, ಆ ಪಾಪಪರಿಹಾರಕ ಯಜ್ಞವನ್ನು ಅಗ್ನಿಯಲ್ಲಿ ಸುಟ್ಟುಬಿಡಬೇಕು. ಯಾಜಕರು ಅದರ ಮಾಂಸವನ್ನು ತಿನ್ನಲೇಬಾರದು.


ಬಳಿಕ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಆಡಿನ ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು.


ಅವನು ತನ್ನ ಕೈಯನ್ನು ಪಶುವಿನ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ತರುವಾಯ ಆರೋನನ ಪುತ್ರರು ಅದರ ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


ಆ ವ್ಯಕ್ತಿಯು ತನ್ನ ಕೈಯನ್ನು ಪಶುವಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಬಾಗಿಲಲ್ಲಿ ಅದನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ಆ ರಕ್ತವನ್ನು ಯಜ್ಞವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


“ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.


ಯಾಜಕನು ಪಾಪಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದು,


“ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ, ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ ಸರ್ವಾಂಗಹೋಮವಾಗಿ ಇನ್ನೊಂದು ಹೋರಿಯನ್ನೂ ಸಮರ್ಪಿಸಬೇಕು. ಇವು ಲೇವಿಯರಿಗೆ ನೈವೇದ್ಯದ ಸಮರ್ಪಣೆಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು