Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:22 - ಪರಿಶುದ್ದ ಬೈಬಲ್‌

22 ಬಳಿಕ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವುದಕ್ಕೆ ವಧಿಸಬೇಕಾದ ಎರಡನೆಯ ಟಗರನ್ನು ತಂದನು. ಆರೋನನೂ ಅವನ ಪುತ್ರರೂ ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮೇಲೆ ಅವನು ಯಾಜಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಾದ ಮೇಲೆ ಯಾಜಕಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ಮೋಶೆ ತರಿಸಿದನು. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಮೇಲೆ ಅವನು ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವನು ಪ್ರತಿಷ್ಠೆಯ ಟಗರಾದ ಇನ್ನೊಂದು ಟಗರನ್ನು ತಂದನು. ಆಗ ಆರೋನನೂ, ಅವನ ಪುತ್ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:22
10 ತಿಳಿವುಗಳ ಹೋಲಿಕೆ  

“ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಅವರೊಂದಿಗೆ ಯಾಜಕ ವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯಿಂದ ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಾ.


ಮಹಿಮಾಪೂರ್ಣಳಾದ ಕನ್ನಿಕೆಯೋ ಎಂಬಂತಿರುವ ಸಭೆಯನ್ನು ತನಗೇ ಕೊಡಬೇಕೆಂದು ಆತನು ಪ್ರಾಣಕೊಟ್ಟನು. ಸಭೆಯು ದೋಷವಿಲ್ಲದೆ ಶುದ್ಧವಾಗಿರಬೇಕೆಂದು ಮತ್ತು ದುಷ್ಟತ್ವವಾಗಲಿ ಪಾಪವಾಗಲಿ ಅಥವಾ ಬೇರೆ ಯಾವುದೇ ತಪ್ಪಾಗಲಿ ಸಭೆಯಲ್ಲಿರಕೂಡದೆಂದು ಆತನು ಪ್ರಾಣಕೊಟ್ಟನು.


ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದಂತೆ ನೀವು ನಿಮ್ಮ ಹೆಂಡತಿಯರನ್ನು ಪ್ರೀತಿಸಬೇಕು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ಇವರು ನಿಜವಾಗಿ ನಿನ್ನ ಸೇವೆಗೆ ಪ್ರತಿಷ್ಠಿತರಾಗಬೇಕೆಂದು ನಾನು ನನ್ನನ್ನೇ ಪ್ರತಿಷ್ಠಿಸಿಕೊಂಡಿದ್ದೇನೆ.


ಮೋಶೆ ಎದೆಯ ಭಾಗವನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿದನು. ಅದು ಯಾಜಕರನ್ನು ನೇಮಿಸುವುದಕ್ಕಾಗಿ ಅರ್ಪಿಸಲ್ಪಟ್ಟ ಟಗರಿನಲ್ಲಿ ಮೋಶೆಯ ಪಾಲಾಗಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.


ಅವುಗಳೇ ಸರ್ವಾಂಗಹೋಮಗಳ, ಧಾನ್ಯಸಮರ್ಪಣೆಗಳ, ಪಾಪಪರಿಹಾರಕ ಯಜ್ಞಗಳ, ದೋಷಪರಿಹಾರಕ ಯಜ್ಞಗಳ, ಸಮಾಧಾನಯಜ್ಞಗಳ ಮತ್ತು ಯಾಜಕರನ್ನು ಪ್ರತಿಷ್ಠಿಸುವ ನಿಯಮಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು