ಯಾಜಕಕಾಂಡ 8:23 - ಪರಿಶುದ್ದ ಬೈಬಲ್23 ಆಗ ಮೋಶೆ ಟಗರನ್ನು ವಧಿಸಿ ಅದರ ಸ್ವಲ್ಪ ರಕ್ತವನ್ನು ಆರೋನನ ಬಲಗಿವಿಯ ತುದಿಗೂ ಅವನ ಬಲಗೈಯ ಹೆಬ್ಬೆರಳಿಗೂ ಅವನ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಅವನ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಮೋಶೆಯು ಅದನ್ನು ವಧಿಸಿ, ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು. ಅಧ್ಯಾಯವನ್ನು ನೋಡಿ |
ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.
ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.
ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು.