Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:28 - ಪರಿಶುದ್ದ ಬೈಬಲ್‌

28 ಬಳಿಕ ಮೋಶೆಯು ಆರೋನನ ಮತ್ತು ಅವನ ಪುತ್ರರ ಕೈಗಳಲ್ಲಿರುವ ಈ ವಸ್ತುಗಳನ್ನು ತೆಗೆದುಕೊಂಡನು. ಮೋಶೆ ಅವುಗಳನ್ನು ವೇದಿಕೆಯಲ್ಲಿ ಸರ್ವಾಂಗಹೋಮದ ಮೇಲಿಟ್ಟು ಅವುಗಳನ್ನು ಹೋಮಮಾಡಿದನು. ಅದು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವ ಸಮರ್ಪಣೆಯಾಗಿತ್ತು. ಹೋಮವಾಗಿ ಅರ್ಪಿಸಲ್ಪಟ್ಟ ಈ ಯಜ್ಞವು ಯೆಹೋವನಿಗೆ ಸುಗಂಧಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆ ಮೇಲೆ ಮೋಶೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಯಜ್ಞವೇದಿಯಲ್ಲಿ ಅದನ್ನು ಹೋಮಮಾಡಿದನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಪಟ್ಟಾಭಿಷೇಕ ಯಜ್ಞವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಮೇಲೆ ಮೋಶೆ ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಬಲಿಪೀಠದಲ್ಲಿ ದಹನಬಲಿ ದ್ರವ್ಯದ ಮೇಲಿಟ್ಟು ಹೋಮಮಾಡಿದನು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನಬಲಿ, ಯಾಜಕಾಭಿಷೇಕ ಬಲಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಮೇಲೆ ಮೋಶೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯಲ್ಲಿ ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಹೋಮಮಾಡಿದನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುಗಂಧಕರವಾದ ಪಟ್ಟಾಭಿಷೇಕಯಜ್ಞವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಮೇಲೆ ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಬಲಿಪೀಠದ ಮೇಲೆ ದಹನಬಲಿಯಾಗಿ ಅವುಗಳನ್ನು ಸುಟ್ಟನು. ಅವು ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸಿದ ಸುಗಂಧಕರ ಪ್ರತಿಷ್ಠೆಯ ಬಲಿಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:28
6 ತಿಳಿವುಗಳ ಹೋಲಿಕೆ  

ಬಳಿಕ ಈ ವಸ್ತುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಯಿಂದ ತೆಗೆದುಕೊಂಡು ಟಗರಿನ ಜೊತೆ ಯಜ್ಞವೇದಿಕೆಯ ಮೇಲಿಡು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧಹೋಮವಾಗಿದ್ದು ಆತನನ್ನು ಮೆಚ್ಚಿಸುವುದು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು