ಯಾಜಕಕಾಂಡ 8:31 - ಪರಿಶುದ್ದ ಬೈಬಲ್31 ತರುವಾಯ ಮೋಶೆಯು ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳಿದನು: “ನೀವು ಮಾಂಸವನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಬೇಯಿಸಿ ತಿನ್ನಬೇಕು. ಪ್ರತಿಷ್ಠೆಕಾಣಿಕೆಯ ಬುಟ್ಟಿಯಲ್ಲಿರುವ ರೊಟ್ಟಿಯೊಡನೆ ಅದನ್ನು ಅಲ್ಲಿ ತಿನ್ನಿರಿ. ಮಾಂಸವನ್ನೂ ರೊಟ್ಟಿಯನ್ನೂ ಆ ಸ್ಥಳದಲ್ಲಿ ತಿನ್ನಿರಿ. ನಾನು ಹೇಳುವ ಹಾಗೆ ಇದನ್ನು ಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆರೋನನಿಗೂ ಅವನ ಮಕ್ಕಳಿಗೂ ಮೋಶೆ ಹೀಗೆಂದನು: “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಬೇಕು. ಅದನ್ನೂ ಯಾಜಕಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ರೊಟ್ಟಿಗಳನ್ನೂ ನೀವು ಅಲ್ಲೆ ಊಟಮಾಡಬೇಕು. ಇದು ಸರ್ವೇಶ್ವರನು ನನಗಿತ್ತ ಆಜ್ಞೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಮತ್ತು ಮೋಶೆ ಆರೋನನಿಗೂ ಅವನ ಮಕ್ಕಳಿಗೂ ಹೀಗಂದನು - ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಬೇಯಿಸಿ ಅದನ್ನೂ ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನೂ ಅಲ್ಲೇ ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಮೋಶೆಯು ಆರೋನನಿಗೂ, ಅವನ ಪುತ್ರರಿಗೂ, “ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ. ಅದನ್ನು ಪ್ರತಿಷ್ಠಿತ ಬುಟ್ಟಿಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು. ನಾನು ಆಜ್ಞಾಪಿಸಿ ಹೇಳಿದಂತೆ, ‘ಆರೋನನು ಮತ್ತು ಅವನ ಪುತ್ರರು ಅದನ್ನು ತಿನ್ನಬೇಕು.’ ಅಧ್ಯಾಯವನ್ನು ನೋಡಿ |